Home News ಸಂವಿಧಾನವನ್ನು ಸುಟ್ಟು ದೇಶದ್ರೋಹ ಬಗೆದವರನ್ನು ಶಿಕ್ಷಿಸುವಂತೆ ಸರ್ಕಾರಕ್ಕೆ ಮನವಿ

ಸಂವಿಧಾನವನ್ನು ಸುಟ್ಟು ದೇಶದ್ರೋಹ ಬಗೆದವರನ್ನು ಶಿಕ್ಷಿಸುವಂತೆ ಸರ್ಕಾರಕ್ಕೆ ಮನವಿ

0

ನಗರದಲ್ಲಿ ಮಂಗಳವಾರ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ಎಂ ಮುನ್ನಯ್ಯ ಮಾತನಾಡಿದರು.
ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಮೀಸಲಾತಿಯನ್ನು ಮತ್ತು ಎಸ್.ಸಿ, ಎಸ್‌.ಟಿ ಕಾಯಿದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜನರು ಸಂವಿಧಾನವನ್ನು ಸುಟ್ಟು ದೇಶದ್ರೋಹ ಬಗೆದಿದ್ದಾರೆ. ಆ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಅವರು ಒತ್ತಾಯಿಸಿದರು.
ಸಂವಿಧಾನ ಸುಟ್ಟ ದೇಶದ್ರೋಹಿಗಳು ಅಂಬೇಡ್ಕರ್ ವಿರುದ್ಧ ಘೋಷಣೆ ಕೂಗಿದ ಬಗ್ಗೆ ವರದಿಯಾಗಿವೆ. ಸಂವಿಧಾನ ಸುಡುವ ವೀಡಿಯೋವನ್ನು ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟು ಈ ಗುಂಪು ವಿಕೃತಿ ಮೆರೆದಿದ್ದಾರೆ. ಸಾರ್ವಜನಿಕವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಸುಟ್ಟು ಹಾಕಿದ್ದಲ್ಲದೆ ಅವಹೇಳನ ಕಾರಿಯಾಗಿ ಮಾತನಾಡಿದ್ದಾರೆ. ಇವರಿಗೆ ಶಿಕ್ಷೆ ಆಗಬೇಕು. ಜನರಿಗೆ ಉತ್ತಮ ಸಂದೇಶ ನೀಡಬೇಕು ಎಂದು ಹೇಳಿದರು.
ಸಂವಿಧಾನ ಸುಡುವುದು, ರಾಷ್ಟ್ರಗೀತೆ, ರಾಷ್ಟ್ರಧ್ವಜ ಇವುಗಳನ್ನು ಅವಮಾನಿಸುವುದು ಅಕ್ಷಮ್ಯ ಅಪರಾದ. ಕೇಂದ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈ ಕೃತ್ಯ ಎಸಗಿದವರನ್ನು ಕೋಡಲೇ ಬಂಧಿಸಿ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ ೨ ತಹಸಿಲ್ದಾರ್ ಲಕ್ಷೀಕಾಂತಮ್ಮ ಅವರಿಗೆ ಸರ್ಕಾರಕ್ಕೆ ತಲುಪಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು.
ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ಎನ್.ಎ ವೆಂಕಟೇಶ್, ಚಲಪತಿ, ಎಲ್.ವಿ ವೆಂಕಟೇಶ್,ಲಕ್ಷೀನಾರಾಯಣ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.