ಜನಸಾಮಾನ್ಯರ ಜೊತೆ ಕೆಲಸ ಮಾಡುವಾಗ ವ್ಯಕ್ತಿಗೆ ಪದವಿಗಿಂತ ಪ್ರಾಮಾಣಿಕ ಸೇವೆ ಬಹು ಮುಖ್ಯವಾಗಿರುತ್ತದೆ. ಆ ನಿಟ್ಟಿನಲ್ಲಿ ಸಮತಾ ಸೈನಿಕ ದಳದ ಪದಾಧಿಕಾರಿಗಳು ಜನರ ಕೆಲಸ ಕಾರ್ಯಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವೆಂಕಟರೋಣಪ್ಪ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಭಾನುವಾರ ಸಮತಾ ಸೈನಿಕ ದಳ ತಾಲ್ಲೂಕು ಸಮಿತಿ ವತಿಯಿಂದ ಜಂಗಮಕೋಟೆ ಹೋಬಳಿ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಗೌರವಿಸುವ ಜೊತೆಗೆ ರಕ್ಷಿಸುವ ಕೆಲಸವನ್ನು ಸಂಘಟನೆಯ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದರು.
ಸಮತಾ ಸೈನಿಕ ದಳದ ತಾಲ್ಲೂಕು ಅಧ್ಯಕ್ಷ ಈಧರೆ ಪ್ರಕಾಶ್ ಮಾತನಾಡಿ, ಜನ ಸಾಮಾನ್ಯರಲ್ಲಿ ಜ್ಞಾನದ ಸಂದೇಶವನ್ನು ಭೋಧಿಸಿದಂತಹ ಬುದ್ಧ ಹಾಗೂ ಭೌದ್ದ ಧರ್ಮದ ನೀತಿಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಮತಾ ಸೈನಿಕ ದಳದ ಜಿಲ್ಲಾ ಕಾರ್ಯಾಧ್ಯಕ್ಷ ಪಿಳ್ಳಾಂಜಿನಪ್ಪ, ಜಿಲ್ಲಾ ಗೌರವಾಧ್ಯಕ್ಷ ಕೆ.ಎಸ್.ದ್ಯಾವಕೃಷ್ಣಪ್ಪ, ಉಪಾಧ್ಯಕ್ಷ ಮೇಲೂರು ಜಿ.ಎಂ.ಮುನಿಶಾಮಯ್ಯ, ತಾಲ್ಲೂಕು ಗೌರವಾಧ್ಯಕ್ಷ ಮುನಿಆಂಜಿನಪ್ಪ, ಪದಾಧಿಕಾರಿಗಳಾದ ವಿಜಯ್‌ಕುಮಾರ್, ಶ್ರೀನಿವಾಸ್, ವೆಂಕಟೇಶ್ ಹಾಜರಿದ್ದರು.
ನೂತನ ಪದಾಧಿಕಾರಿಗಳು
ಜಂಗಮಕೋಟೆ ಹೋಬಳಿ ಅಧ್ಯಕ್ಷರಾಗಿ ಎಲ್.ಮುನಿರಾಜು, ಗೌರವಾಧ್ಯಕ್ಷರಾಗಿ ಮಳ್ಳೂರು ವೆಂಕಟರಾಮಪ್ಪ, ಪ್ರಧಾನಕಾರ್ಯದರ್ಶಿಯಾಗಿ ಸುಗಟೂರು ಭುವನ್, ಕಾರ್ಯಧ್ಯಕ್ಷರಾಗಿ ನಾರಾಯಣದಾಸರಹಳ್ಳಿ ಬಾಲಚಂದ್ರ, ಖಜಾಂಚಿಯಾಗಿ ಜೆ.ವೆಂಕಟಾಪುರ ಪ್ರಸನ್ನಕುಮಾರ್, ಉಪಾಧ್ಯಕ್ಷರಾಗಿ ಜಂಗಮಕೋಟೆ ಚಿಕ್ಕಮುನಿಯಪ್ಪ, ಬೈರಸಂದ್ರ ಮನೋಹರ್, ಅತ್ತಿಗಾನಹಳ್ಳಿ ಮುನಿಕೆಂಚಪ್ಪ , ಹೊಸಪೇಟೆ ವೆಂಕಟರಾಮಪ್ಪ, ನಾರಾಯಣದಾಸರಹಳ್ಳಿ ರಾಜಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ಜಂಗಮಕೋಟೆ ಗೋಪಾಲಕೃಷ್ಣ, ಮಹೇಶ್ ಸೇರಿದಂತೆ ತಾಲ್ಲೂಕು ಉಪಾಧ್ಯಕ್ಷರಾಗಿ ಜಂಗಮಕೋಟೆ ಎಲ್.ಮುನಿರಾಜು, ಸಂಘಟನಾ ಕಾರ್ಯದರ್ಶಿಯಾಗಿ ಶಿಡ್ಲಘಟ್ಟ ನರಸಿಂಹ ಅವರನ್ನು ಆಯ್ಕೆ ಮಾಡಲಾಯಿತು.