Home News ಸಮುದಾಯದ ಸಹಯೋಗದೊಂದಿಗೆ ಅದ್ದೂರಿಯಾಗಿ ಕನಕಜಯಂತಿ ಆಚರಣೆ

ಸಮುದಾಯದ ಸಹಯೋಗದೊಂದಿಗೆ ಅದ್ದೂರಿಯಾಗಿ ಕನಕಜಯಂತಿ ಆಚರಣೆ

0

ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕನಕಜಯಂತಿ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ವೆಂಕಟೇಶ್ ಮಾತನಾಡಿದರು.
ಕನಕದಾಸರು ಕೇವಲ ದಾಸಶ್ರೇಷ್ಠರು ಮಾತ್ರವಲ್ಲದೇ ಅತ್ಯುತ್ತಮ ಸಾಹಿತಿ, ಕವಿ, ಗಾಯಕರಾಗಿದ್ದು ಜಾತಿ ನಿರ್ಮೂಲನೆ ಮಾಡುವಲ್ಲಿ ಶ್ರಮಿಸಿದಂತಹ ಮಹಾಪುರುಷ. ಇಂತಹ ಮಹಾತ್ಮರ ಜಯಂತಿಯನ್ನು ಎಲ್ಲರೂ ಸೇರಿ ಆಚರಿಸಬೇಕು ಎಂದು ಅವರು ತಿಳಿಸಿದರು.
ಇದೇ ನವೆಂಬರ್ ೨೬ ರ ಸೋಮವಾರ ೫೩೧ ನೇ ಕನಕಜಯಂತಿಯನ್ನು ಸಮುದಾಯದ ಸಹಯೋಗದೊಂದಿಗೆ ಅದ್ದೂರಿಯಾಗಿ ಆಚರಿಸಲು ಅಧಿಕಾರಿಗಳು ಸಹಕರಿಸಬೇಕು ಎಂದರು.
ಜಯಂತಿಯ ಅಂಗವಾಗಿ ಬೆಳಗ್ಗೆ ೯ ಗಂಟೆಗೆ ನಗರದ ಕೆಂಪಣ್ಣ ವೃತ್ತದಲ್ಲಿರುವ ಶ್ರೀ ಕನಕ ಭಜನೆ ಮಂದಿರದಲ್ಲಿ ಕನಕ ಜಯಂತಿಗೆ ಗಣ್ಯರಿಂದ ಚಾಲನೆ ನೀಡಿ, ದೇವಾಲಯದಿಂದ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಕನಕದಾಸರ ಭಾವಚಿತ್ರವನ್ನು ಪಲ್ಲಕ್ಕಿಗಳ ಮೆರವಣಿಗೆ ಮೂಲಕ ಸಾಗಿ, ತಾಲ್ಲೂಕು ಕಚೇರಿಯ ಮುಂಭಾಗದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.
ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ಸಮುದಾಯದ ವಿದ್ಯಾರ್ಥಿಗಳು ಸೇರಿದಂತೆ ಹಿರಿಯ ಮುಖಂಡರಿಗೆ ಸನ್ಮಾನ ಕಾರ್ಯಕ್ರಮವನ್ನು ಸಮುದಾಯದಿಂದ ಮಾಡಲು ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರೇಡ್ ೨ ತಹಸೀಲ್ದಾರ್ ವೈ ಎಲ್.ಹನುಮಂತರಾವ್, ನಗರಸಭೆ ಆಯುಕ್ತ ಚಲಪತಿ, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್‌ಕುಮಾರ್, ಕುರುಬರ ಸಂಘದ ರಾಜ್ಯ ಉಪಾಧ್ಯಕ್ಷ ಎ.ನಾಗರಾಜ್, ತಾಲ್ಲೂಕು ಕುರುಬರ ಸಂಘದ ಗೌರವಾಧ್ಯಕ್ಷ ಎಂ.ಗಣೇಶಪ್ಪ, ಅಧ್ಯಕ್ಷ ಕೆ.ಮಂಜುನಾಥ, ಕಾರ್ಯದರ್ಶಿ ರಾಮಾಂಜಿನಪ್ಪ ಹಾಜರಿದ್ದರು.

error: Content is protected !!