Home News ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವೈದ್ಯರಿಂದ ಆರೋಗ್ಯದದ ಬಗ್ಗೆ ಮಾಹಿತಿ

ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವೈದ್ಯರಿಂದ ಆರೋಗ್ಯದದ ಬಗ್ಗೆ ಮಾಹಿತಿ

0

ನಗರದ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ಗುರುವಾರ ಶಾಲಾ ಮಕ್ಕಳ ರಕ್ತದ ಗುಂಪಿನ ಪರಿಚಯ ಹಾಗೂ ಆರೋಗ್ಯದ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ವಿಜಯ್‌ಕುಮಾರ್ ಮಾತನಾಡಿದರು.
ಈಗಾಗಲೇ ಬೇಸಿಗೆ ಶುರುವಾಗಿದ್ದು ತಾಫಮಾನ ಹೆಚ್ಚಾಗಿರುವುದರಿಂದ ಮಕ್ಕಳು ಹೆಚ್ಚಾಗಿ ದ್ರವ ಪದಾರ್ಥಗಳನ್ನು ಸೇವಿಸಬೇಕು. ಆರೋಗ್ಯದ ಬಗ್ಗೆ ಹೆಚ್ಚಿ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದರು.
ಮಕ್ಕಳಿಗೆ ಶುಚಿತ್ವ, ಆಹಾರ ಪದ್ಧತಿ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ತಮ್ಮ ರಕ್ತದ ಗುಂಪು ಯಾವುದು ಎನ್ನುವುದನ್ನು ತಿಳಿಸಲು ಶಾಲೆಗಳಿಗೆ ಭೇಟಿ ನೀಡಿ ರಕ್ತದ ಗುಂಪು ಪರೀಕ್ಷೆ ಮಾಡುವ ಕೆಲಸ ಕೂಡ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಸುಮಾರು 442 ಮಕ್ಕಳ ರಕ್ತ ಪರೀಕ್ಷೆ ನಡೆಸಿ ಮಕ್ಕಳಿಗೆ ಅವರ ರಕ್ತದ ಗುಂಪಿನ ಬಗ್ಗೆ ತಿಳಿಸಲಾಯಿತು.
ಡಾ.ಸೋನಾಲಿ, ಡಾ.ರಾಘವೇಂದ್ರ, ಡಾ.ಭರತ್, ಡಾ.ವೈಶಾಲಿ, ಆಸ್ಪತ್ರೆಯ ಸಿಬ್ಬಂದಿ ನಂದಿನಿ, ಮುನಿರತ್ನಮ್ಮ, ಲೋಕೇಶ್, ವಿಜಯ, ಸುಮಾ, ಭ್ರಮರಾಂಬಿಕಾ, ದರ್ಶಿನಿ ಹಾಜರಿದ್ದರು.

error: Content is protected !!