Home News ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

0

ಬಡತನ, ಅಜ್ಞಾನ, ಅನಕ್ಷರತೆ, ಮೂಢನಂಬಿಕೆ ಹಾಗೂ ಬಾಲ್ಯವಿವಾಹ ಇತ್ಯಾದಿ ಕಾರಣಗಳಿಂದ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಶಾಸಕ ರಾಜಣ್ಣ ತಿಳಿಸಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜನಸಂಖ್ಯೆ ಹೆಚ್ಚಳದ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆ ಯರು ಹೆಚ್ಚು ಜವಾಬ್ದಾರಿ ನಿರ್ವಹಿಸ ಬೇಕು. ಜನಸಂಖ್ಯೆ ಹೆಚ್ಚಾದಂತೆಲ್ಲಾ ದೇಶದಲ್ಲಿ ಅನೇಕ ಸಮಸ್ಯೆಗಳು ಉದ್ವವಿಸುತ್ತಿವೆ. ಮೂಲಭೂತ ಸೌಕರ್ಯಗಳಾದ ಮನೆ, ನೀರು , ನಿರುದ್ಯೋಗ ಸಮಸ್ಯೆ, ಮುಂತಾದ ಸಮಸ್ಯೆಗಳಿಗೆಲ್ಲ ವಿದ್ಯೆ ಒಂದೇ ಪರಿಹಾರವಾಗಿದೆ ಎಂದು ತಿಳಿಸಿದರು.
ತಹಸಿಲ್ದಾರ್ ಅಜಿತ್ ಕುಮಾರ್ ರೈ ಮಾತನಾಡಿ, ಜನಸಂಖ್ಯೆ ಹೆಚ್ಚಾದಂತೆಲ್ಲಾ ನಿರುದ್ಯೋಗ ಸಮಸ್ಯೆ ಸಹ ಹೆಚ್ಚಾಗುತ್ತಿದ್ದು, ಎಲ್ಲರಿಗೂ ಉದ್ಯೋಗ ಸೃಷ್ಟಿ ಮಾಡಲು ಸಾದ್ಯವಿಲ್ಲ, ಯುವಕರು ಸರ್ಕಾರ ಕೊಡುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗ ಪ್ರಾರಂಬಿಸಿ, ಬೇರೆಯವರಿಗೂ ಉದ್ಯೋಗ ನೀಡಿ ಎಂದು ತಿಳಿಸಿದರು.
ನಗರದ ಸರ್ಕಾರಿ ಆಸ್ಪತ್ರೆಯ ಆವರಣದಿಂದ ಡಾಲ್ಪಿನ್ ಶಾಲಾ ಮಕ್ಕಳಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಮೂಡಿಸಿದರು.
ಕ್ಷೇತ್ರ ಶಿಕ್ಷಣಾದಿಕಾರಿ ರಘುನಾಥರೆಡ್ಡಿ, ನಗರಸಭಾ ಆಯುಕ್ತ ಛಲಪತಿ, ಸಿ.ಡಿ.ಪಿ.ಓ ಲಕ್ಷೀದೇವಮ್ಮ, ನಗರಸಭಾ ಉಪಾದ್ಯಕ್ಷೆ ಪ್ರಭಾವತಿ ಸುರೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಅನಿಲ್ ಕುಮಾರ್, ಆಶಾ ಕಾರ್ಯಕರ್ತೆರು, ವಿದ್ಯಾರ್ಥಿಗಳು ಹಾಜರಿದ್ದರು.