ನಗರದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗವಾಗಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಶ್ರೀ ರಾಮ ಲಕ್ಷಣ ಸಮೇತ ಆಂಜನೇಯಸ್ವಾಮಿಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇಸ್ಥಾನದ ಉತ್ಸವ ಮೂರ್ತಿಯನ್ನು ಮೂರನೇ ಶ್ರಾವಣ ಶನಿವಾರದಂದು ತಾಲ್ಲೂಕು ಸವಿತಾ ಸಮಾಜದ ಬಂಧುಗಳು ನೆರವೇರಿಸುವುದು ಸಂಪ್ರದಾಯ. ಈ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಿದ ಸಮಾಜದ ಬಾಂಧವರು, ದೇವರಿಗೆ ಪೂಜೆ ಸಲ್ಲಿಸಿ, ವಿಶೇಷ ಅಲಂಕಾರ ಮಾಡಿ ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ಮೆರವಣಿಗೆಗೆ ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು. ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಪೂಜೆಯಲ್ಲಿ ಪಾಲ್ಗೊಂಡರು. ತಾಲ್ಲೂಕು ಸವಿತಾ ಸಮಾಜದ ಗೌರವಾಧ್ಯಕ್ಷ ರಮೇಶ್, ಕಾರ್ಯಾಧ್ಯಕ್ಷ ಮುನಿರಾಜು, ಅಧ್ಯಕ್ಷ ನಾರಾಯಣಸ್ವಾಮಿ, ವೆಂಕಟೇಶ್, ಮುನಿಕೃಷ್ಣಪ್ಪ, ಕೃಷ್ಣ, ಚಂದ್ರು, ರಾಜಣ್ಣ, ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.
- Advertisement -
- Advertisement -
- Advertisement -