Home News ಸಹಕಾರಿ ಕ್ಷೇತ್ರವನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ…

ಸಹಕಾರಿ ಕ್ಷೇತ್ರವನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ…

0

ಕೇಂದ್ರ ಸರ್ಕಾರ 500-–1000 ಸಾವಿರ ಮುಖಬೆಲೆ ಬಾಳುವ ನೋಟುಗಳನ್ನು ನಿಷೇಧಿಸಿರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಸಹಕಾರ ಬ್ಯಾಂಕ್‌ಗಳಲ್ಲಿ ಐದುನೂರು ಮತ್ತು ಸಾವಿರ ರೂಗಳ ಹಳೆಯ ನೋಟುಗಳನ್ನು ಜಮಾ ಮಾಡಲು ಅವಕಾಶವನ್ನು ನಿರಾಕರಿಸುವ ಮೂಲಕ ತಾರತಮ್ಯ ನೀತಿಯನ್ನು ಅನುಸರಿ ಸಹಕಾರಿ ಕ್ಷೇತ್ರವನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಎಂ. ಗೋವಿಂದಗೌಡ ದೂರಿದರು.
ಶಿಡ್ಲಘಟ್ಟ- ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಅಂಜನಾದ್ರಿ ಸಂಕೀರ್ಣದಲ್ಲಿ(ಪೆಟ್ರೋಲ್ ಬಂಕ್ ಪಕ್ಕ) ಕೋಲಾರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸ್ಥಳಾಂತರಗೊಂಡಿದ್ದು, ಗುರುವಾರ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಗ್ರಾಮೀಣ ಪ್ರದೇಶದಲ್ಲಿರುವ ರೈತರಿಗೆ, ಸ್ವಸಹಾಯ ಸಂಘಗಳ ಮಹಿಳೆಯರಿಗೆ, ಕೂಲಿ ಕಾರ್ಮಿಕರಿಗೆ ತೀವ್ರ ತೊಂದರೆಯಾಗಿದೆ. ಸರ್ಕಾರ ಕೂಡಲೇ ನಿರ್ಧಾರವನ್ನು ಬದಲಿಸಿಕೊಳ್ಳದಿದ್ದಲ್ಲಿ ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಎಫ್‌.ಸಿ.ಎಸ್ ಬ್ಯಾಂಕ್‌ಗಳ ಅಧ್ಯಕ್ಷರು, ಡಿಸಿಸಿ ಬ್ಯಾಂಕಿನ ನಿರ್ದೇಶಕರು ಮತ್ತು ಸಹಕಾರಿಗಳನ್ನು, ಬ್ಯಾಂಕ್‌ನ ಅತ್ಯುತ್ತಮ ಗ್ರಾಹಕರನ್ನು ಸನ್ಮಾನಿಸಿದರು.
ರಾಜ್ಯ ಸಹಕಾರ ಮಹಾಮಂಡಳಿಯ ಉಪಾಧ್ಯಕ್ಷ ಎಚ್.ವಿ.ನಾಗರಾಜ್, ಜಿಲ್ಲಾ ಪಂಚಾಯತಿ ಸದಸ್ಯರಾದ ಬಂಕ್ ಮುನಿಯಪ್ಪ, ಡಾ.ಜಯರಾಮ ರೆಡ್ಡಿ, ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಪಿ.ಶಿವಾರೆಡ್ಡಿ, ಆನೂರು ಪಿ.ವಿ.ನಾಗರಾಜ್, ರೂಪ ಶಶಿಧರ್, ಶಂಕರಪ್ಪ, ಹನುಮೇಗೌಡ, ಕೃಷ್ಣೇಗೌಡ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಎಸ್.ಆನಂದ್, ಮೇಲ್ವಿಚಾರಕ ಲಿಂಗರಾಜು ಮತ್ತಿತರರು ಹಾಜರಿದ್ದರು.