Home News ಸಹಕಾರಿ ಸಂಘಗಳ ಬೆಳವಣಿಗೆಗೆ ಷೇರುದಾರರು ಶ್ರಮಿಸಬೇಕು

ಸಹಕಾರಿ ಸಂಘಗಳ ಬೆಳವಣಿಗೆಗೆ ಷೇರುದಾರರು ಶ್ರಮಿಸಬೇಕು

0

ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ಸಂಘದ ಎಲ್ಲಾ ಷೇರುದಾರರು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ನಗರೇಶ್ವರ ಕಲ್ಯಾಣಮಂಟಪದಲ್ಲಿ ಆಯೋಜಿಸಲಾಗಿದ್ದ ೬೩ ನೇ ಅಖಿಲ ಭಾರತ ಸಹಕಾರ ಸಪ್ತಾಹ –2೦೧೬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಹಕಾರಿ ಸಂಘಗಳ ಮೂಲಕ ಸಹಕಾರಿ ಬೇಸಾಯ, ಸಹಕಾರಿ ಉದ್ದಿಮೆ, ಸಹಕಾರಿ ಮಾರಾಟ ಮತ್ತು ವ್ಯಾಪಾರ, ಸಹಕಾರಿ ಪತ್ತು ಮತ್ತು ಹಣಕಾಸಿನ ನಿರ್ವಹಣೆ, ಶಿಕ್ಷಣ, ಕೌಶಲ್ಯಾಧಾರಿತ ತರಬೇತಿ, ಪ್ರಚಾರ, ಮಾನವನ ಇತರೇ ಸಹಕಾರಿ ಚಟುವಟಿಕೆಗಳು ಹಾಗೂ ಆರೋಗ್ಯದ ಉದ್ದೇಶಗಳಿಗಾಗಿ ಉತ್ತೇಜನ ನೀಡುವಂತಹ ಕೆಲಸವಾಗಬೇಕು. ಸಹಕಾರಿ ಸಂಘಗಳಿಂದ ಪಡೆಯುವಂತಹ ಸಾಲಗಳನ್ನು ನಾಗರಿಕರು ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವ ಮೂಲಕ ಸಂಘಗಳನ್ನು ಉಳಿಸಿ ಬೆಳಸಬೇಕು ಎಂದರು.
ಕೋಚಿಮುಲ್ ನಿರ್ದೇಶಕ ಬಂಕ್‌ಮುನಿಯಪ್ಪ ಮಾತನಾಡಿ, ಸಾಲಗಳನ್ನು ಯಾವ ಉದ್ದೇಶಕ್ಕಾಗಿ ಪಡೆಯುತ್ತಾರೊ ಅದೇ ಉದ್ದೇಶಕ್ಕೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ರೈತರು ಕೇವಲ ಕೃಷಿಯನ್ನು ಮಾತ್ರ ಅವಲಂಬಿಸದೆ ಹೈನುಗಾರಿಕೆ, ಮಿನಿಅರಣ್ಯ, ಗುಡಿಕೈಗಾರಿಕೆಗಳ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.
ತೀವ್ರ ನೀರಿನ ಅಭಾವದಿಂದಾಗಿ ಬಯಲುಸೀಮೆ ಭಾಗದ ಜನರು ರೇಷ್ಮೆಯಿಂದ ಸುಧಾರಣೆ ಕಾಣಲು ಸಾಧ್ಯವಾಗುವುದಿಲ್ಲ ಹಾಗಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತಹ ಚಟುವಟಿಕೆಗಳ ಕಡೆಗೆ ಹೆಚ್ಚು ಒಲವು ತೋರಿಸಬೇಕು ಎಂದರು.
ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ, ಜಿಲ್ಲಾ ಯೂನಿಯನ್ ನಿರ್ದೇಶಕ ತಾದೂರುರಮೇಶ್, ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷ, ತಾಲ್ಲೂಕು ಹಾಲು ಉತ್ಪಾದಕರ ನೌಕರರ ಸಂಘದ ಅಧ್ಯಕ್ಷ ಚಂದ್ರೇಗೌಡ, ಗೋವಿಂದರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!