23.1 C
Sidlaghatta
Tuesday, August 16, 2022

ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ

- Advertisement -
- Advertisement -

ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಒಕ್ಕಲಿಗರ ಯುವ ಸೇನೆ ಮಾದರಿಯಾಗಬೇಕೆಂದು ಆದಿಚುಂಚನಗಿರಿ ಶಾಖಾ ಮಠದ ಮಂಗಳಾನಂದನಾಥಸ್ವಾಮೀಜಿ ಆಶೀರ್ವಚನದಲ್ಲಿ ತಿಳಿಸಿದರು.
ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಪಂಚಾಯತಿಯಲ್ಲಿ 11ನೇ ಮೈಲಿ ಕ್ರಾಸ್‌ನಲ್ಲಿ ಗುರುವಾರ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯತಿ ಒಕ್ಕಲಿಗರ ಯುವಸೇನೆ ಸಂಘದ ಘಟಕ, ನಾಮಫಲಕ ಉದ್ಘಾಟನೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿ, ಪರಿಸರ ಸಂರಕ್ಷಣೆ, ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಯುವಕರು ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು. ಸಂಘದ ಉದ್ಘಾಟನೆಯ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುತ್ತಿರುವುದು ಅಭಿನಂದನೀಯ ಎಂದು ಹೇಳಿದರು.
ತಾಲ್ಲೂಕು ಒಕ್ಕಲಿಗರ ಯುವಸೇನೆ ಅಧ್ಯಕ್ಷ ಜೆ.ಎಸ್‌.ವೆಂಕಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಎಂ.ತ್ಯಾಗರಾಜು, ಅಶ್ವತ್ಥನಾರಾಯಣರೆಡ್ಡಿ, ಶ್ರೀನಿವಾಸರೆಡ್ಡಿ, ನಾಗೇಶ್, ಹರೀಶ್‌, ನಗರ ಘಟಕದ ಅಧ್ಯಕ್ಷ ಪುರುಷೋತ್ತಮ್‌, ಮುರಳಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here