Home News ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

0

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಜಂಗಮಕೋಟೆ ವಲಯದ ಪ್ರಗತಿ ಬಂಧು ಜ್ಞಾನ ವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟದಿಂದ ಭಾನುವಾರ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ರಾಜಘಟ್ಟದ ವಿಶ್ವಕುಂಡಲಿ ಯೋಗಾಶ್ರಮದ ಕಾಳೀತನಯ ಶ್ರೀ ಉಮಾಮಹೇಶ್ವರ ತೀರ್ಥ ಸ್ವಾಮೀಜಿ ಮಾತನಾಡಿದರು.
ಪ್ರತಿಯೊಬ್ಬರಲ್ಲೂ ಧಾರ್ಮಿಕ ಪ್ರಜ್ಞೆ ಮೂಡಬೇಕು. ಭಗವಂತನ ಆರಾಧನೆಯ ಮೂಲಕ ಚೈತನ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಅವರು ತಿಳಿಸಿದರು.
ಧರ್ಮವು ಮಾನವನ ಕಲ್ಯಾಣದ ತಳಹದಿ, ಸರ್ಕಾರ ಮಾಡುವ ಕೆಲಸವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಅನೇಕ ಕುಟುಂಬಗಳಿಗೆ ಅನುಕೂಲ ಮಾಡುತ್ತಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಕ್ಕೆ ಸೇರಿ ಸದಸ್ಯರಲ್ಲಿ ಶಿಸ್ತು, ವ್ಯವಹಾರ ಜ್ಞಾನ, ಸಂಘಟನಾ ಶಕ್ತಿ, ವೈಯಕ್ತಿಕ ಜೀವನದಲ್ಲಿ ಬದಲಾವಣೆಯಾಗಿ ಕುಟುಂಬಗಳು ಸರ್ವತೋಮುಖ ಅಭಿವೃದ್ಧಿಯತ್ತ ಸಾಗಿವೆ. ಇದು ಸಾಮಾಜಿಕ ಚಳುವಳಿಯಂತಿದೆ ಎಂದರು.
ಒಗ್ಗಟ್ಟಿಗೆ, ಯಶಸ್ಸಿಗೆ, ಸಮಾನತೆಗೆ ಈ ಕಾರ್ಯಕ್ರಮ ಸಹಕಾರಿ. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಒಂದೇ ವೇದಿಕೆಯಲ್ಲಿ ಮೂಡಿ ಬಂದಿದೆ. ಈ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರಿರುವುದಕ್ಕೆ ಸಂಘಟನಾಶಕ್ತಿ, ಹೊಂದಾಣಿಕೆ ಮುಖ್ಯ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಶೋಭ ಶಶಿಕುಮಾರ್, ಎಂ.ನಾರಾಯಣಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಸಂತ್, ಮೋಹನ್, ಆಶ ಹಾಜರಿದ್ದರು.

error: Content is protected !!