24.1 C
Sidlaghatta
Saturday, November 8, 2025

ಸಾಲಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಿ

- Advertisement -
- Advertisement -

ಹಿಂದುಳಿದ ವರ್ಗಗಳ ಅಭಿವೃದ್ಧಿಯನ್ನೇ ಮೂಲ ಉದ್ದೇಶವನ್ನಿರಿಸಿಕೊಂಡ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲಗಳನ್ನು ನೀಡುತ್ತಿದ್ದು ಅದರ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 32 ಮಂದಿ ಫಲಾನುಭವಿಗಳಿಗೆ ತಲಾ 40 ಸಾವಿರ ರೂಗಳಂತೆ ಒಟ್ಟು 12,80,000 ರೂಗಳ ಚೆಕ್‌ ವಿತರಿಸಿ ಅವರು ಮಾತನಾಡಿದರು.
ಸಾಲ ಪಡೆದ ಪಲಾನುಭವಿಗಳು ಸರಿಯಾಗಿ ರೀತಿಯಲ್ಲಿ ಸಾಲವನ್ನು ಮರು ಪಾವತಿ ಮಾಡುವ ಮೂಲಕ ಇನ್ನಷ್ಟು ಹೆಚ್ಚಿನ ಆರ್ಥಿಕ ಅನುಕೂಲವನ್ನು ಪಡೆದುಕೊಳ್ಳಬಹುದಾಗಿದೆ. ಹಣವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಆರ್ಥಿಕವಾಗಿ ಪ್ರಗತಿ ಕಾಣಬೇಕೆಂದರು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಸವರಾಜು, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಲಕ್ಷ್ಮೀನಾರಾಯಣ ರೆಡ್ಡಿ, ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ, ಸೂರ್ಯನಾರಾಯಣಗೌಡ, ಮುಗಿಲಡಿಪಿ ನಂಜಪ್ಪ, ಶ್ರೀಧರ್, ನಗರಸಭೆ ಸದಸ್ಯರಾದ ವೆಂಕಟಸ್ವಾಮಿ, ಅಪ್ಸರ್‌ಪಾಷ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!