ಬ್ಯಾಂಕುಗಳಿಂದ ಪಡೆದ ಸಾಲವನ್ನು ನಿಗಧಿತ ಸಮಯದಲ್ಲಿ ಮರುಫಾವತಿ ಮಾಡುವುದರೊಂದಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮೊತ್ತದ ಸಾಲ ಪಡೆಯುವ ಅವಕಾಶ ಪಡೆದುಕೊಂಡು ಎಲ್ಲರೂ ಆರ್ಥಿಕವಾಗಿ ಮುಂದುವರೆಯಬೇಕು ಎಂದು ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.
ತಾಲೂಕಿನ ತಲಕಾಯಲಬೆಟ್ಟದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣಮಂಟಪದಲ್ಲಿ ಗುರುವಾರ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಹಾಗು ತಾಲೂಕಿನ ಈ ತಿಮ್ಮಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘದ ಮೂಲಕ ಏರ್ಪಡಿಸಲಾಗಿದ್ದ ಸ್ವ ಸಹಾಯ ಗುಂಪುಗಳಿಗೆ ಸಾಲ ವಿತರಣೆ ಮಾಡುವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರಿಗೆ ಅವರ ಮನೆ ಬಾಗಿಲಿಗೆ ಬಂದು ಸಾಲ ಸೌಲಭ್ಯ ವಿತರಿಸುವ ವಿಶೇಷ ಯೋಜನೆಯನ್ನು ರಾಜ್ಯದಲ್ಲಿಯೇ ಮೊಟ್ಟ ಮೊದಲ ಭಾರಿಗೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅನುಷ್ಠಾನಗೊಳಿಸಿದ್ದು ಗ್ರಾಮೀಣ ಭಾಗದಲ್ಲಿನ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಡಿ.ಸಿ.ಸಿ ಬ್ಯಾಂಕ್ ತಮ್ಮ ಮನೆ ಬಾಗಿಲಿಗೆ ಬಂದು ಸಾಲ ಸೌಲಭ್ಯ ನೀಡುತ್ತಿದ್ದು ಯಾವ ಉದ್ದೇಶಕ್ಕೆ ಸಾಲ ಪಡೆಯುತ್ತೀರೋ ಅದಕ್ಕಾಗಿಯೇ ಹಣ ಬಳಸಿ ಸಕಾಲದಲ್ಲಿ ಸಾಲ ಮರು ಫಾವತಿಸುವುದರಿಂದ ಬ್ಯಾಂಕುಗಳು ಅಭಿವೃದ್ದಿಯಾಗುತ್ತದೆ ಹಾಗು ಮತ್ತೊಬ್ಬರಿಗೆ ಸಾಲ ಸೌಲಭ್ಯ ಕಲ್ಪಿಸಲು ಸಹಕಾರಿಯಾಗುತ್ತದೆ ಹಾಗಾಗಿ ಎಲ್ಲರೂ ಸಕಾಲದಲ್ಲಿ ಸಾಲ ಮರು ಫಾವತಿಸಿ ಸಹಕಾರಿ ಕ್ಷೇತ್ರದ ಅಭಿವೃದ್ದಿಯಲ್ಲಿ ಸಹಕರಿಸುವಂತೆ ಮನವಿ ಮಾಡಿದರು.
ಜಿ.ಪಂ ಸದಸ್ಯ, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ ಸಕಾಲದಲ್ಲಿ ಮಳೆಯಾಗದೇ ಬರಪೀಡಿತ ಪ್ರದೇಶವಾಗಿರುವ ಈ ಭಾಗದ ಜನರಿಗೆ ಹೈನುಗಾರಿಕೆಯೊಂದೇ ಜೀವಾಳವಾಗಿದೆ. ಮಹಿಳೆಯರು ಮನೆಯಲ್ಲಿ ಒಂದು ಹಸು ಮೇಯಿಸಿಕೊಂಡು ಹಾಲು ಕರೆಯುವುದರಿಂದ ಕುಟುಂಬಗಳ ನಿರ್ವಹಣೆ ಅಲ್ಪ ಮಟ್ಟಿಗೆ ಸುಧಾರಿಸಿದೆ. ಡಿಸಿಸಿ ಬ್ಯಾಂಕಿನಿಂದ ಶೂನ್ಯ ಬಡ್ಡಿ ಧರದಲ್ಲಿ ನೀಡುತ್ತಿರುವ ಸಾಲದ ಹಣವನ್ನು ಯಾವ ಉದ್ದೇಶಕ್ಕೆ ತೆಗೆದುಕೊಳ್ಳುತ್ತೀರೋ ಅದಕ್ಕಾಗಿಯೇ ಬಳಸಿ ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಲ ಸೌಲಭ್ಯ ಪಡೆಯಬಹುದು ಎಂದರು.
ಇದೇ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ವಿ.ನಾಗರಾಜ್, ಪಿ.ಶಿವಾರೆಡ್ಡಿ ಮಾತನಾಡಿದರು.
ಈ ತಿಮ್ಮಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘದ ನಾಮಪತ್ರ ಸದಸ್ಯತ್ವ ಪಡೆದಿರುವ ಸುಮಾರು 31 ಸ್ವ ಸಹಾಯ ಸಂಘಗಳಿಗೆ 1 ಕೋಟಿ 18 ಲಕ್ಷ ರೂ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸಲಾಯಿತು.
ಶಿಡ್ಲಘಟ್ಟ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಜಂಗಮಕೋಟೆ ಎಸ್‍ಎಫ್‍ಸಿಎಸ್‍ನ ಸಿಇಓ ನಾಗರಾಜ್, ಈ ತಿಮ್ಮಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷೆ ಚನ್ನಮ್ಮ, ನಿರ್ದೇಶಕರಾದ ಲಗುಮಕ್ಕ, ವೆಂಕಟಾಚಲಪತಿ, ದಸ್ತುಸಾಬಿ, ನರಸಿಂಹಪ್ಪ, ಬೈರಾರೆಡ್ಡಿ, ಸಿಇಓ ಅಕ್ಕಲಪ್ಪ ಆನೇಮಡುಗು ಸದಾಶಿವರೆಡ್ಡಿ, ಮಳ್ಳೂರು ಮಂಜುನಾಥ್, ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -