Home News ಸ್ವಾತಂತ್ರ ದಿನಾಚರಣೆಯ ಅಂಗವಾಗಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ

ಸ್ವಾತಂತ್ರ ದಿನಾಚರಣೆಯ ಅಂಗವಾಗಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ

0

ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ತ್ಯಾಗರಾಜ್ ಮಾತನಾಡಿದರು.
ಮಕ್ಕಳಲ್ಲಿ ದೇಶ ಪ್ರೇಮ ಹೆಚ್ಚಿಸಲು ದೇಶಭಕ್ತಿ ಗೀತೆಗಳನ್ನು ಕಲಿಸಿ ಹಾಡುವಂತೆ ಮಾಡಬೇಕು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸ್ವಾಭಿಮಾನ, ಸ್ವದೇಶಿ ವಸ್ತುಗಳ ಬಳಕೆಯ ಮೋಹ ಹೆಚ್ಚಾಗುವಂತೆ ಮಾಡಬೇಕಾದ ಅಗತ್ಯವಿದೆ. ನಮ್ಮ ದೇಶದ ಹಿರಿಮೆ, ಗರಿಮೆ, ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾಪುರಷರ ಮಹತ್ವ ಸಾರುವ ಗೀತೆಗಳು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ. ದೇಶಭಕ್ತಿ ಗೀತೆ ದೇಶದ ಇತಿಹಾಸವನ್ನು ಸಂಕ್ಷಿಪ್ತವಾಗಿ ಮನ ಮುಟ್ಟುವಂತೆ ಕಟ್ಟಿಕೊಡುತ್ತದೆ ಎಂದು ಹೇಳಿದರು.
ಒಟ್ಟುಹದಿನಾಲ್ಕು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿವಿಧ ಬಗೆಯ ದೇಶಭಕ್ತಿ ಗೀತೆಯನ್ನು ಹಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದಲ್ಲಿ, ನಡಿಪಿನಾಯಕನಹಳ್ಳಿಯ ನವೋದಯ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಸರಸ್ವತಿ ಕಾನ್ವೆಂಟ್ ಶಾಲೆ (ದ್ವಿತೀಯ), ಆನೂರು ಶಾಲೆ (ತೃತೀಯ) ಹಾಗೂ ಉಲ್ಲೂರುಪೇಟೆ ಶಾಲಾ ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನವನ್ನು ಪಡೆದರು.
ಕಬ್ ಬುಲ್ -ಬುಲ್ ವಿಭಾಗದಲ್ಲಿ, ಸರಸ್ವತಿ ಶಾಲೆ (ಪ್ರಥಮ), ಬಿ.ಜಿ.ಎಸ್ ಶಾಲೆ (ದ್ವಿತೀಯ) ಸ್ಥಾನವನ್ನು ಪಡೆದರು. ಎಲ್ಲರಿಗೂ ಪಾರಿತೋಷಕ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಹಾಗು ಜಿಲ್ಲಾ ತರಬೇತಿ ಆಯುಕ್ತ ಸಿ.ಬಿ.ಪ್ರಕಾಶ್, ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಸಾವಿತ್ರಮ್ಮ, ನಾರಾಯಣಸ್ವಾಮಿ ಹಾಜರಿದ್ದರು.

error: Content is protected !!