Home News ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮ

ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮ

0

ಕಾಯಕದಲ್ಲಿ ಮೇಲು ಕೀಳಿಲ್ಲ, ಯಾವುದೇ ವೃತ್ತಿ ಕೈಗೊಂಡರೂ ಅದು ಶ್ರೇಷ್ಠವೇ ಎಂದು ತೋರಿಸಿಕೊಟ್ಟ ಬಸವಾದಿ ಶರಣರಲ್ಲಿ ಹಡಪದ ಅಪ್ಪಣ್ಣ ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಗ್ರೇಡ್‌2 ತಹಶೀಲ್ದಾರ್‌ ಲಕ್ಷ್ಮೀಕಾಂತಮ್ಮ ತಿಳಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹನ್ನೆರಡನೇ ಶತಮಾನದ ಬಸವಣ್ಣನವರ ಆಪ್ತರಾಗಿದ್ದವರು ಹಡಪದ ಅಪ್ಪಣ್ಣನವರು. ಅಪ್ಪಣ್ಣ 200ಕ್ಕೂ ಹೆಚ್ಚು ವಚನಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.
ಹಡಪದ ಅಪ್ಪಣ್ಣ ಜಯಂತ್ಯುತ್ಸವವನ್ನು ಪುನರ್‌ ಪರಿಶೀಲಿಸಿ ಸವಿತಾ ಸಮಾಜದ ಮೂಲ ಪುರುಷ ಸವಿತಾ ಮಹರ್ಷಿ ಜಯಂತ್ಯುತ್ಸವ ಎಂದು ಆಚರಿಸಬೇಕೆಂದು ಒತ್ತಾಯಿಸಿದ್ದ ಸವಿತಾ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ.
ಶಿಕ್ಷಣ ಇಲಾಖೆಯ ರಂಗನಾಥ್‌ , ಡಾ.ವಿಜಯ್‌ ಹಾಜರಿದ್ದರು.

error: Content is protected !!