ವಿಶ್ವಭಾರತಿಗೆ ಕನ್ನಡದಾರತಿ, ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ, ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ ಮುಂತಾದ ಜನಪ್ರಿಯ ಗೀತೆಗಳ ಕತೃ, ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾದ ಚನ್ನವೀರ ಕಣವಿಯವರು ಜನಮಾನಸದಲ್ಲಿ ಅವರ ಬರಹದಿಂದ ನೆಲೆಸಿದ್ದಾರೆ ಎಂದು ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು.
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಚನ್ನವೀರ ಕಣವಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಣವಿಯವರ ಜೀವಧ್ವನಿ ಎಂಬ ಕೃತಿಗೆ ೧೯೮೧ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ೧೯೯೬ರಲ್ಲಿ ಹಾಸನದಲ್ಲಿ ನಡೆದ ಅರವತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಣವಿಯವರು ಅಧ್ಯಕ್ಷರಾಗಿದ್ದರು. ಆಳ್ವಾಸ್ -ನುಡಿಸಿರಿ 2008 ರ ಸಮ್ಮೇಳನದ ಅಧ್ಯಕ್ಷರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಕಣವಿಯವರ ಸಾಧನೆಗೆ ಸಿಕ್ಕ ಗೌರವಗಳು ಎಂದು ವಿವರಿಸಿದರು.
ಶಿಕ್ಷಕ ಚಾಂದ್‌ಪಾಷ ಚನ್ನವೀರ ಕಣವಿಯವರ ಜೀವನ, ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಗ್ರಾಮ ಪಂಚಾಯ್ತಿ ಸದಸ್ಯ ಎ.ಎಂ.ತ್ಯಾಗರಾಜ್, ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ, ಶಿಕ್ಷಕರಾದ ಅಶೋಕ್, ಅಂಗನವಾಡಿ ಶಿಕ್ಷಕಿ ನಳಿನಮ್ಮ, ಗ್ರಾಮಸ್ಥರಾದ ನರಸಿಂಹಮೂರ್ತಿ, ವೆಂಕಟಮ್ಮ, ಲೀಲಮ್ಮ ಹಾಜರಿದ್ದರು.
- Advertisement -
- Advertisement -
- Advertisement -
- Advertisement -