ಕಳೆದ ಎಂಟು ವರ್ಷಗಳಿಂದ ಕೋಲಾರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ದಲಿತರ ಹಾಗೂ ಹಿಂದುಳಿದವರ ಧ್ವನಿಯಾಗಿ ಅಂಬೇಡ್ಕರ್ ಸೇವಾ ಸಮಿತಿ ಮೂಲಕ ಹೋರಾಟಗಳನ್ನು ನಡೆಸುತ್ತಾ ಬಂದಿದ್ದೇವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೋಲಾರ ಲೋಕಸಭೆ ಕ್ಷೇತ್ರದಿಂದ ಚುನಾವಣೆ ಕಣಕ್ಕೆ ಇಳಿಯಲಿದ್ದೇವೆ ಎಂದು ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಂಬೇಡ್ಕರ್ ಸೇವಾ ಸಮಿತಿಯ ನೂತನ ತಾಲ್ಲೂಕು ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಏಳು ಬಾರಿ ಸಂಸದರಾಗಿರುವ ಕೆ.ಎಚ್.ಮುನಿಯಪ್ಪ ಕ್ಷೇತ್ರದ ಯಾವುದೇ ದಲಿತರ ಹಾಗೂ ಹಿಂದುಳಿದವರ ಏಳಿಗೆಗೆ ಶ್ರಮಿಸಿಲ್ಲ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದ ಕೆ.ಎಚ್.ಮುನಿಯಪ್ಪರನ್ನು ಸೋಲಿಸುವ ಪಣ ತೊಡಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಮುಂದಿನ ಅಗಸ್ಟ್ ೧೭ ರಂದು ಶಿಡ್ಲಘಟ್ಟದಲ್ಲಿ ಕೆ.ಎಚ್.ಮುನಿಯಪ್ಪ ಹಟಾವೋ ಕಾರ್ಯಕ್ರಮ ರೂಪಿಸಿದ್ದು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಮತ್ತು ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಅಂಬೇಡ್ಕರ್ ಸೇವಾ ಸಮಿತಿಯ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಶ್ರೀನಿವಾಸ್, ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್, ಪದಾಧಿಕಾರಿಗಳಾದ ಮನು, ಶಶಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







