ಅಟಲ್ ಬಿಹಾರಿ ವಾಜಪೇಯಿ ಅವರ 92ನೇ ಹುಟ್ಟುಹಬ್ಬದ ಪ್ರಯುಕ್ತ ‘ಕವಿನಮನ’

- Advertisement -
- Advertisement -

ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರಳತೆ, ಹೃದಯವಂತಿಕೆ ಮತ್ತು ಕವಿಮನಸ್ಸನ್ನು ನೆನೆಯುವ ಉದ್ದೇಶದಿಂದ ಕವಿ ನಮನ ಕಾರ್ಯಕ್ರಮವನ್ನು ನಡೆಸುತ್ತಿರುವುದಾಗಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್‌ ತಿಳಿಸಿದರು.
ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ಅಟಲ್ ಬಿಹಾರಿ ವಾಜಪೇಯಿ ಅವರ 92ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ಹೆಸರಾಂತ ಗಾಯಕ ಕಡಬುಗೆರೆ ಮುನಿರಾಜು ಮತ್ತು ತಂಡದವರಿಂದ ಕವಿ ನಮನ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾಜಪೇಯಿ ಅವರು ಅಭಿವೃದ್ಧಿಯ ಹರಿಕಾರರಾಗಿದ್ದು, ತಮ್ಮ ಕೆಲಸಗಳ ಮೂಲಕ ಅವರು ದೇಶದ ಜನರ ಹೃದಯ ಗೆದ್ದಿದ್ದಾರೆ. ವಾಜಪೇಯಿ ಒಬ್ಬ ಅಜಾತಶತ್ರು, ದೇಶಕಂಡ ಹೆಮ್ಮಯ ನಾಯಕ. ಭ್ರಷ್ಟಚಾರ ನಿರ್ಮೂಲನೆ ಮಾಡಿದ ವ್ಯಕ್ತಿ. ಅವರ ಆಡಳಿತದ ಅವಧಿಯಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಕಂಡಿತ್ತು. ಈಗ ನರೇಂದ್ರ ಮೋದಿ ಅವರ ಹಾದಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ವಾಜಪೇಯಿ ಅವರಿಗೆ ದೇವರು ಆರೋಗ್ಯ ಮತ್ತು ಆಯಸ್ಸು ನೀಡಲಿ ಎಂದು ಪಾರ್ಥಿಸುತ್ತೇವೆ ಎಂದರು.
ವಾಜಪೇಯಿ ರಚಿಸಿದ ಕವನಗಳ ಜೊತೆಯಲ್ಲಿ ರಾಷ್ಟ್ರಕವಿ ಕುವೆಂಪು, ದ.ರಾ.ಬೇಂದ್ರೆ, ಕೆ.ಎಸ್‌.ನರಸಿಂಹಸ್ವಾಮಿ, ಜಿ.ಎಸ್‌.ಶಿವರುದ್ರಪ್ಪ ಮುಂತಾದ ಕವಿಗಳ ರಚನೆಗಳನ್ನು ಹೆಸರಾಂತ ಗಾಯಕ ಕಡಬುಗೆರೆ ಮುನಿರಾಜು ಮತ್ತು ತಂಡದವರು ಹಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಂದ್ರಗೌಡ, ಶ್ರೀರಾಮರೆಡ್ಡಿ, ಸದಾಶಿವ, ಸುಜಾತಮ್ಮ, ದಾಮೋದರ್‌, ರಮೇಶ್‌ ಬಾಯಿರಿ, ಮುನಿರಾಜು, ಪುರುಷೋತ್ತಮ್‌, ಬೈರಾರೆಡ್ಡಿ ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!