Home News ಆನೆಯ ಮೇಲೆ ಗಂಗಾಧರೇಶ್ವರಸ್ವಾಮಿ ಮೂರ್ತಿಯ ಮೆರವಣಿಗೆ

ಆನೆಯ ಮೇಲೆ ಗಂಗಾಧರೇಶ್ವರಸ್ವಾಮಿ ಮೂರ್ತಿಯ ಮೆರವಣಿಗೆ

0

ತಾಲ್ಲೂಕಿನ ಜಂಗಮಕೋಟೆಯಲ್ಲಿ ಭಾನುವಾರ ಶ್ರೀ ಪ್ರಸನ್ನ ಗಂಗಾಧರೇಶ್ವರಸ್ವಾಮಿ ಗೆಳೆಯರ ಬಳಗದ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಆನೆಯ ಮೇಲೆ ಗಂಗಾಧರೇಶ್ವರಸ್ವಾಮಿ ಮೂರ್ತಿಯ ಮೆರವಣಿಗೆ ಮತ್ತು ಗ್ರಾಮದ ಹದಿನಾಲ್ಕು ದೇವರುಗಳ ಮೆರೆವಣಿಗೆಯನ್ನು ಗ್ರಾಮದಲ್ಲಿ ಆಯೋಜಿಸಲಾಗಿತ್ತು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಲ್ಲಿ ಭಾನುವಾರ ನಡೆದ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಆನೆಯ ಮೇಲೆ ಗಂಗಾಧರೇಶ್ವರಸ್ವಾಮಿ ಮೂರ್ತಿಯ ಮೆರವಣಿಗೆ ಮಾಡಲಾಯಿತು.

ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಂ.ರಾಜಣ್ಣ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಹಮತ್ ಜಾನ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಮೇಲೂರು ರವಿಕುಮಾರ್, ಬಿಜೆಪಿ ಮುಖಂಡ ಸುರೇಶ್, ವಿಜಯಪುರ ಮಠದ ಶ್ರೀ ಮಹಾದೇವ ಸ್ವಾಮಿಗಳು, ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
 

error: Content is protected !!