ಖಾಸಗಿ ಶಾಲೆಗಳಿಗೆ ಬರಬೇಕಾಗಿರುವ 2019-20 ನೇ ಸಾಲಿನ ಆರ್ ಟಿ ಇ ಹಣ ಮರುಪಾವತಿ ಮಾಡುವುದು ಹಾಗೂ ಕೋವಿಡ್ 19 ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ತಾಲ್ಲೂಕು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ವಿಸ್ಡಂ ನಾಗರಾಜ್ ಒತ್ತಾಯಿಸಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ತಾಲ್ಲೂಕು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಕೋವಿಡ್ 19 ಮಹಾಮಾರಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿದ ಲಾಕ್ ಡೌನ್ ನಿಂದ ಖಾಸಗಿ ಶಾಲೆಗಳಿಗೆ ಬರಬೇಕಾಗಿದ್ದ ಶೇ 30 ರಷ್ಟು ಭೋದನಾ ಶುಲ್ಕ ಪಾವತಿಯಾಗಿರುವುದಿಲ್ಲ. ಅಲ್ಲದೇ ಸರ್ಕಾರ ಶುಲ್ಕ ವಸೂಲಿಗೆ ಪೋಷಕರಿಗೆ ಒತ್ತಾಯ ಮಾಡಬಾರದು ಎಂಬ ಆದೇಶ ಮಾಡಿರುವುದರಿಂದ ಯಾವೊಬ್ಬ ಪೋಷಕರು ಮಕ್ಕಳ ಶುಲ್ಕ ಪಾವತಿಸಲು ಮುಂದೆ ಬರುತ್ತಿಲ್ಲ. ಸಾಲದ್ದಕ್ಕೆ ಸರ್ಕಾರದಿಂದ ನಮಗೆ ಬರಬೇಕಾಗಿರುವ ಆರ್ ಟಿ ಇ ಬಾಕಿ ಹಣ ಸಹ ಪಾವತಿಸಿರುವುದಿಲ್ಲ. ಹಾಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಬಹಳಷ್ಟು ಕಷ್ಟ ಅನುಭವಿಸುವಂತಾಗಿದೆ. ಕೂಲಡೇ ಸರ್ಕಾರ ಬೇರೆಲ್ಲಾ ವಲಯಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೋರಿ ಮನವಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ನಾರಾಯಣಮೂರ್ತಿ, ಪ್ರೆಸಿಡೆನ್ಸಿ ಶಾಲೆಯ ಮುಖ್ಯಸ್ಥ ಇಮ್ರಾನ್‌ಪಾಷ, ಯುನಿವರ್ಸಲ್ ಶಾಲೆಯ ಆಡಳಿತಾಧಿಕಾರಿ ಶಾಂತರಾಜು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







