ಮಕ್ಕಳ ಕಲಿಕೆಗೆ ಅನ್ಯಭಾಷೆಗಳಿಗಿಂತ ಮಾತೃಭಾಷೆಯೇ ಉತ್ತಮವಾದ ಮಾಧ್ಯಮ ಎಂದು ಶಿಕ್ಷಕ ಎ.ಬಿ. ನಾಗರಾಜು ತಿಳಿಸಿದರು.
ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬದಲಾದ ಸನ್ನಿವೇಶದಲ್ಲಿ ಪೋಷಕರಲ್ಲಿ ಇಂಗ್ಲೀಷ್ ವ್ಯಾಮೋಹ ಹೆಚ್ಚುತ್ತಿದ್ದು, ಮಕ್ಕಳು ಚಿಕ್ಕವಯಸ್ಸಿನಲ್ಲಿ ತಮ್ಮ ಭಾವನೆಗಳನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಾಗದೇ ಮಾನಸಿಕವಾಗಿ ಕುಂಠತವಾಗುತ್ತಿದೆ ಎಂದು ಅವರು ವಿವರಿಸಿದರು.
ಮುಖ್ಯಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಮಾತನಾಡಿ, ಕನ್ನಡ ಸಾಹಿತ್ಯವು ವಿಪುಲವಾಗಿದ್ದು, ಮಕ್ಕಳು ಕನ್ನಡ ಸಾಹಿತ್ಯವನ್ನು ಅಧ್ಯಯನ ಮಾಡಬೇಕು ಎಂದು ಕರೆನೀಡಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆರ್. ನಾಗೇಶ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯಿತಿ ಸದಸ್ಯ ಶಿವಶಂಕರಪ್ಪ, ಷಣ್ಮುಗಪ್ಪ, ಎನ್. ಅಶ್ವತ್ಥಪ್ಪ, ಎಂ. ದೇವರಾಜು, ಎಸ್‍ಡಿಎಂಸಿ ಸದಸ್ಯ ಎಂ. ಶಂಕರಪ್ಪ, ಎನ್.ಪಿ. ನಾಗರಾಜಪ್ಪ, ಚಂದ್ರಪ್ಪ, ಎಸ್.ಟಿ. ಬಚ್ಚೇಗೌಡ, ಎಸ್.ಪಿ. ನಾರಾಯಣಸ್ವಾಮಿ, ಶಿಕ್ಷಕ ಬಿ.ನಾಗರಾಜು, ಎಂ.ವೈ. ಲಕ್ಷ್ಮಯ್ಯ, ಶಿಕ್ಷಕಿ ತಾಜೂನ್, ಅನಿತಾ, ಮತ್ತಿತರರು ಇದ್ದರು. ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.