ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಉದ್ಯೋಗಖಾತ್ರಿ (ನರೇಗಾ) ಯೋಜನೆ ಜಾರಿ ಮಾಡಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ದೊಡ್ಡದಾಸರಹಳ್ಳಿ ಗ್ರಾಮದಲ್ಲಿ ಬುಧವಾರ ಚೀಮಂಗಲ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
ಶೇಕಡ ೫೦ ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು, ೪ ಕೋಟಿ ರೈತರ ಸಾಲ ಮನ್ನಾ ಮಾಡಿದ ಯುಪಿಎ ಸರ್ಕಾರದ ಸಾಧನೆಗಳನ್ನು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಮನೆ ಮನೆಗೂ ಹೋಗಿ ತಿಳಿಸುವಂತಹ ಕೆಲಸ ಮಾಡಬೇಕು.
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಅನ್ನಭಾಗ್ಯ ಯೋಜನೆ, ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಅಲ್ಪಸಂಖ್ಯಾತರಿಗಾಗಿ ಶಾದಿಭಾಗ್ಯದಂತಹ ಮಹತ್ತರ ಯೋಜನೆಗಳನ್ನು ಜಾರಿಗೊಳಿಸಿದ್ದು ರಾಜ್ಯ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಈ ಭಾರಿಯ ಚುನಾವಣೆ ಎದಿರುಸುತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಜನಬೆಂಬಲವಿದೆ ಎಂದರು.
ಮುಖಂಡರಾದ ಆರ್.ಶ್ರೀನಿವಾಸ್, ಡಿ.ವಿ.ವೆಂಕಟೇಶ್, ಚೀಮಂಗಲ ತಾಲ್ಲೂಕು ಪಂಚಾಯತಿ ಕ್ಷೇತ್ರದ ಅಭ್ಯರ್ಥಿ ಸಂತೋಷ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -