ಬಡ ವರ್ಗದ ಜನರಿಗೂ ಕಾನೂನು ಸೇವೆಗಳು ಸಿಗಬೇಕು ಎಂಬ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಕಾನೂನು ಸೇವೆ ಕಾಯಿದೆಯಿಂದ ಸಾಮಾಜಿಕ ಬದಲಾವಣೆಗಳಲ್ಲಿ ಕಾನೂನು ಸೇವಾ ಪ್ರಾಧಿಕಾರ ಪ್ರಮುಖ ಪಾತ್ರ ವಹಿಸಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಟಿ.ಎಲ್. ಸಂದೀಶ್ ಹೇಳಿದರು.
ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಸೇವಾ ಪ್ರಾಧಿಕಾರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಕಾನೂನು ಸೇವೆಗಳನ್ನು ಒದಗಿಸಲು ಉಚಿತವಾಗಿ ವಕೀಲರನ್ನು ನೇಮಿಸಿಕೊಡಲಾಗುವುದು ಹಾಗು ಬಹುತೇಕ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳ ಮೂಲಕ ರಾಜಿ ಮಾಡಿಸುವ ಕೆಲಸವನ್ನು ಕಾನೂನು ಸೇವಾ ಪ್ರಾಧಿಕಾರ ಮಾಡುತ್ತಾ ಬಂದಿದೆ.
ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರದೇಶದ ಜನತೆಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇವೆ ಹಾಗಾಗಿ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ. ಪಾಪಿರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎಸ್. ಕುಮುದಿನಿ, ವಕೀಲರಾದ ಜಿ.ಎನ್. ವಿಶ್ವನಾಥಪ್ಪ, ಸುಬ್ರಮಣ್ಯಪ್ಪ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ವಿ.ಎಂ. ಬೈರಾರೆಡ್ಡಿ, ಯಣ್ಣಂಗೂರು ಮಂಜುನಾಥ್, ಎಂ.ಬಿ. ಲೋಕೇಶ್, ವೀಣಾ, ಲಕ್ಷ್ಮಿ, ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -