ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸವಿತಾ ಸಮಾಜದಿಂದ ವಿಶೇಷ ಪೂಜಾ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕು ಸವಿತಾ ಸಮಾಜ ಹಾಗೂ ತಾಲ್ಲೂಕು ಸವಿತಾ ಕಲಾವಿದರ ಸಂಘದ ವತಿಯಿಂದ ಮೂರನೇ ಶ್ರಾವಣ ಶನಿವಾರದ ಪ್ರಯುಕ್ತ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಶಾಸಕ ಎಂ.ರಾಜಣ್ಣ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಗರದ ಅಶೋಕ ರಸ್ತೆಯಲ್ಲಿ ಅನಾದಿಕಾಲದಿಂದಲೂ ನೆಲೆಸಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆದಿದ್ದು ಸವಿತಾ ಸಮಾಜದ ಎಲ್ಲಾ ಮುಖಂಡರು ಯುವಕರು ಹಾಗು ನಗರದ ನಾಗರಿಕರು ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಊರಿನ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕಿಯಲ್ಲಿ ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಮೆರವಣಿಗೆ ಮಾಡಲಾಯಿತು.
ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷ ಎಸ್‌.ನಾರಾಯಣಸ್ವಾಮಿ, ಕಾರ್ಯದರ್ಶಿ ಬೆಳ್ಳೂಟಿ ರಮೇಶ್‌, ಗೌರವಾಧ್ಯಕ್ಷ ರಮೇಶ್‌, ದೇವರಾಜ್‌, ವೆಂಕಟೇಶ್‌, ಚಂದ್ರು, ರಾಜಣ್ಣ, ನಾಗಪ್ಪ, ಮುನಿಶಾಮಪ್ಪ, ನಂದೀಶ್ವರಪ್ಪ, ಕೃಷ್ಣ, ಬಾಲರಾಜು, ಬಸವರಾಜು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!