೨೦೧೭-೧೮ ನೇ ಸಾಲಿನ ಆರ್.ಟಿ.ಇ.ಅಡಿಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಅಲ್ಪಸಂಖ್ಯಾತವಲ್ಲದ ಅನುದಾನ ರಹಿತ ಶಾಲೆಗಳ ಸೀಟುಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪೋಷಕರಿಗೆ ಮಾರ್ಚ್ ೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಾಗೃತಿ ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿದ್ದು ಇದರ ಸದುಪಯೋಗವನ್ನು ಪೊಷಕರು ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಮಗುವಿನ ಭಾವಚಿತ್ರ, ಮಗುವಿನ ಜನನ ಪ್ರಮಾಣಪತ್ರ, ಮಗುವಿನ ಆಧಾರ್ ಕಾರ್ಡ್, ಪೋಷಕರ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಇಲ್ಲದಿದ್ದಲ್ಲಿ ಅರ್ಜಿ ಸಲ್ಲಿಸಿರುವ ಸ್ವೀಕೃತಿ ಪತ್ರ, ಹಿಂದುಳಿದ ವರ್ಗಗಳಾಗಿದ್ದಲ್ಲಿ ಜಾತಿ, ಆದಾಯ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು. ಪರಿಶಿಷ್ಟ ಜಾತಿ ಪ್ರವರ್ಗ-೧ ಆಗಿದ್ದಲ್ಲಿ ಜಾತಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ವಯೋಮಿತಿ : ಎಲ್.ಕೆ.ಜಿಗೆ ೩ ವರ್ಷ ೧೦ ತಿಂಗಳಿಂದ ೪ ವರ್ಷ ೧೦ ತಿಂಗಳು, ೧ ನೇ ತರಗತಿಗೆ ೫ ವರ್ಷ ೧೦ ತಿಂಗಳಿಂದ ೬ ವರ್ಷ ೧೦ ತಿಂಗಳಾಗಿದೆ.
- Advertisement -
- Advertisement -
- Advertisement -