ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯುವಕ ಯುವತಿಯರಿಗೆ ೨೦೧೬–೧೭ ನೇ ಸಾಲಿನ ಜಿಲ್ಲಾ ಮಟ್ಟದ ಯುವಸಮ್ಮೇಳನ ಕಾರ್ಯಾಗಾರ ತರಬೇತಿ ಕಾರ್ಯಕ್ರಮ ಕೇವಲ ಕಾಟಾಚಾರದ ಹಣ ಲಪಟಾಯಿಸುವ ಕಾರ್ಯಕ್ರಮವಾಗಿದೆ ಎಂದು ರಾಷ್ಟ್ರೀಯ ಮಟ್ಟದ ಕ್ರೀಡಾಪಟು ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.
ಯುವಕರಿಗಾಗಿ ಏರ್ಪಡಿಸಿರುವ ಕಾರ್ಯಕ್ರಮದ ಬಗ್ಗೆ ತಾಲ್ಲೂಕಿನ ಯಾವುದೇ ಸಂಘ ಸಂಸ್ಥೆಗಳಿಗೆ ಮಾಹಿತಿ ನೀಡದೇ ಕೇವಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳನ್ನು ಬಳಸಿಕೊಂಡು ಕಾರ್ಯಕ್ರಮ ಆಯೋಜಿಸಿರುವ ಆಯೋಜಕರು ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಕಾರ್ಯಕ್ರಮ ಆಯೋಜಿಸಲು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಿಂದ ೧ ಲಕ್ಷ ಅನುಧಾನ ಬಿಡುಗಡೆಯಾಗಿದ್ದು ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಯುವಕರಿಗೆ ಟಿಎ. ಡಿಎ ನೀಡಬೇಕು. ಆದರೆ ಅಧಿಕಾರಿಗಳು ಹಣ ಲಪಟಾಯಿಸುವ ಉದ್ದೇಶದಿಂದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಂದ ಖಾಲಿ ಪೇಪರ್ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
- Advertisement -
- Advertisement -
- Advertisement -