ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾಮಂಡಳಿಯು ಜನವರಿಯಲ್ಲಿ ನಡೆಸಿದ ಡ್ರಾಯಿಂಗ್ ಲೋಯರ್ ಪರೀಕ್ಷೆಯಲ್ಲಿ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೇ.೧೦೦ ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು ೧೪ ಮಂದಿ ವಿದ್ಯಾರ್ಥಿಗಳ ಪೈಕಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ೫ ಮಂದಿ ಪ್ರಥಮದರ್ಜೆ, ೮ ಮಂದಿ ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು ಒಬ್ಬ ವಿದ್ಯಾರ್ಥಿಯು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಶಾಲಾ ಪ್ರಕಟಣೆ ತಿಳಿಸಿದೆ.
ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಎಸ್‌ಡಿಎಂಸಿ ಅಧ್ಯಕ್ಷ ಆರ್.ನಾಗೇಶ್, ಗ್ರಾಮಪಂಚಾಯಿತಿ ಸದಸ್ಯರು ಮತ್ತು ಎಸ್‌ಡಿಎಂಸಿ ಸದಸ್ಯರು, ಬೋಧಕವರ್ಗದವರು ಅಭಿನಂದಿಸಿದ್ದಾರೆ.
- Advertisement -
- Advertisement -
- Advertisement -