20.6 C
Sidlaghatta
Thursday, July 31, 2025

ತಾಲ್ಲೂಕಿನಲ್ಲಿ ಆಡಳಿತ ಯಂತ್ರ ಕುಸಿದಿದೆ – ಬಿ.ಸಿ.ನಂದೀಶ್‌ ಆರೋಪ

- Advertisement -
- Advertisement -

‘ತಾಲ್ಲೂಕಿನಲ್ಲಿ ಆಡಳಿತ ಯಂತ್ರ ಕುಸಿದಿದೆ. ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್ ಆರೋಪಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಅಧಿಕಾರಿಗಳ ವೇಗಕ್ಕೆ ಕಡಿವಾಣ ಹಾಕುವಲ್ಲಿ ಶಾಸಕ ವಿ.ಮುನಿಯಪ್ಪ ವಿಫಲರಾಗಿದ್ದಾರೆ. ತಾಲ್ಲೂಕಿನಲ್ಲಿ ಇದೇ ರೀತಿಯಾಗಿ ಆಡಳಿತ ವ್ಯವಸ್ಥೆ ವಿಫಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದರು.
ಮೈತ್ರಿ ಸರ್ಕಾರದಲ್ಲಿ ಕೇವಲ ಸಚಿವ ಸ್ಥಾನಗಳ ಹಂಚಿಕೆಯಲ್ಲೆ ಕಾಲಕಳೆದಿದ್ದಾರೆ. ಶಾಲಾವಿದ್ಯಾರ್ಥಿಗಳಿಗೆ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಿಲ್ಲ, ರೈತರಿಗೆ ಸಾಲ ಮನ್ನಾ ಮಾಡುವುದಾಗಿ ನೀಡಿದ್ದ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸಲಿಲ್ಲ. ಕ್ಷೇತ್ರಗಳ ಅಭಿವೃದ್ಧಿಯನ್ನು ಕಡೆಗಣಿಲಾಗಿದೆ. ಹಾಲಿನ ದರ ಕಡಿಮೆ ಮಾಡಿದರು. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿದ್ದಾರೆ. ಅಧಿಕಾರ, ಹಣದಾಸೆಗಾಗಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಒಂದಾಗಿವೆ. ಜನರ ಹಿತ ಅವರಿಗೆ ಬೇಕಾಗಿಲ್ಲ. ಈ ಸರ್ಕಾರ ಹೆಚ್ಚುದಿನ ಬಾಳಲ್ಲ ಎಂದರು.
ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ೨೦೧೫–-೧೬ ನೇ ಸಾಲಿನಲ್ಲಿ ೨ ಕೋಟಿ ೪೯ ಲಕ್ಷ ಅನುದಾನವನ್ನು ತಾಲ್ಲೂಕಿನ ರೈತರು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ರಾಗಿ, ಜೋಳ, ಅವರೆ, ಸೇರಿದಂತೆ ಬೆಳೆಗಳಿಗೆ ವಿಮಾ ಮಾಡಿಸಲು ಜುಲೈ ೩೧ ರವರೆಗೆ ಅವಕಾಶವಿದ್ದು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ೪ ವರ್ಷಗಳ ಕೇಂದ್ರ ಸರ್ಕಾರದ ಜನಪರವಾದ ಕಾರ್ಯಕ್ರಮಗಳಿಂದ ಕಂಗಾಲಾಗಿರುವ ಇತರೆ ಪಕ್ಷಗಳಿಗೆ ನಡುಕ ಶುರುವಾಗಿದೆ. ಮುಂದಿನ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಒಂದಾಗುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದು ಪುನಃ ಅಧಿಕಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.
‘ಸಮರ್ಥನೆಗಾಗಿ ಸಂಪರ್ಕ’ ಕಾರ್ಯಕ್ರಮದಡಿ ಸಾಧಕರ ಕುರಿತು ತಯಾರಾಗುವ ಪುಸ್ತಕದ ಮೂಲಕ ಜನರಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಲಿದ್ದು, ತಾಲ್ಲೂಕಿನಲ್ಲಿ ೫೦ ಮಂದಿಯನ್ನು ಗುರುತಿಸಿದ್ದೇವೆ ಎಂದರು.
ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಆರ್.ಸುರೇಂದ್ರಗೌಡ, ದಾಮೋದರ್, ಸುಜಾತಮ್ಮ, ದೇವರಾಜ್, ಪುರುಷೋತ್ತಮ, ಮುನಿರಾಜು, ವೆಂಕಟೇಶ್, ನಟರಾಜ್ ಉಪಸ್ಥಿತರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!