ಪೂರ್ಣ ಪುಟ · Open full page
News

ತಾಲ್ಲೂಕಿನಾದ್ಯಂತ ವಿವಿಧ ರಾಮ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಆಚರಣೆ

ತಾಲ್ಲೂಕಿನಾದ್ಯಂತ ಶ್ರೀರಾಮನವಮಿಯನ್ನು ವಿವಿಧ ರಾಮ ದೇವಾಲಯಗಳಲ್ಲಿ ವಿಶೇಷ ಪೂಜೆಸಲ್ಲಿಸಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಜಂಗಮಕೋಟೆ, ನಾಗಮಂಗಲ, ಚೌಡಸಂದ್ರ, ಅಪ್ಪೇಗೌಡನಹಳ್ಳಿ ಗೇಟ್‌, ಸಾದಲಿ, ದಿಬ್ಬೂರಹಳ್ಳಿ,ಮೇಲೂರು, ಹುಣಸೇನಹಳ್ಳಿ ಸ್ಟೇಷನ್‌, ಎಚ್‌.ಕ್ರಾಸ್‌, ಮಳಮಾಚನಹಳ್ಳಿ ಮುಂತಾದೆಡೆ ದೇವಾಲಯಗಳಲ್ಲಿವಿಶೇಷ ಪೂಜೆಗಳನ್ನು ನಡೆಸಿ ಭಕ್ತರಿಗೆ ಸೌತೆಕಾಯಿ ಹೆಸರುಬೇಳೆ ಮತ್ತು ಪಾನಕವನ್ನು ವಿತರಿಸಿದರು.
ಪಟ್ಟಣದ ಕೋಟೆ ವೃತ್ತದ ಶ್ರೀರಾಮ ದೇವಾಲಯ, ಉಲ್ಲೂರುಪೇಟೆಯ ಭಜನೆ ಮಂದಿರ ಹಾಗೂಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯಗಳಲ್ಲಿ ರಾಮನವಮಿಯ ಪ್ರಯುಕ್ತಪೂಜಾಕಾರ್ಯಕ್ರಮಗಳು ನಡೆದವು.
ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಸೀತಾ ರಾಮ ಲಕ್ಷ್ಮಣಆಂಜನೇಯಸ್ವಾಮಿ ಮತ್ತು ವೀರಾಂಜನೇಯಸ್ವಾಮಿ ನೂತನ ಉತ್ಸವ ವಿಗ್ರಹಗಳ ಪ್ರಾಣಪ್ರತಿಷ್ಠಾಪಿಸಿ ಕುಂಭಾಭಿಷೇಕವನ್ನು ನಡೆಸಲಾಯಿತು. ವೀರಾಂಜನೇಯಸ್ವಾಮಿಗೆ ಅಭಿಷೇಕ, ಪೂಜೆ, ದ್ರಾಕ್ಷಿ ಗೋಡಂಬಿ ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೀತಾರಾಮ ಕಲ್ಯಾಣೋತ್ಸವಕ್ಕೆ ನೂರಾರು ಜನರು ಸಾಕ್ಷಿಯಾದರು. ಉಟ್ಲು ಕಂಬದ ಪೂಜೆ, ಕ್ಷೀರ ಉಟ್ಲು ಮಹೋತ್ಸವಹಾಗೂ ಮನರಂಜನಾ ಉಟ್ಲೋತ್ಸವವನ್ನು ನಡೆಸಿದರು.


📰 ಇದನ್ನೂ ಓದಿ

News

ಶ್ರೀರಾಮನವಮಿಯ ಪ್ರಯುಕ್ತ ಉಟ್ಲು ಪರಿಷೆ

Sidlaghatta : ಶಿಡ್ಲಘಟ್ಟ ನಗರದ ಚಿಂತಾಮಣಿ ರಸ್ತೆಯಲ್ಲಿರುವ ಶ್ರೀವೀರಾಂಜನೇಯ ದೇವಾಲಯದ ಮುಂಭಾಗದಲ್ಲಿ ಶುಕ್ರವಾರ ಶ್ರೀರಾಮನವಮಿಯ ಪ್ರಯುಕ್ತ 96ನೇ ವರ್ಷದ ಉಟ್ಲು ಪರಿಷೆ ನಡೆಯಿತು. ಕ್ಷೀರ…

News

ಯೋಗಿ ದ್ಯಾವಪ್ಪ ತಾತನವರ ಆರಾಧನಾ ಮಹೋತ್ಸವ

sidlaghatta : ದ್ಯಾವಪ್ಪನಗುಡಿ (ಜಯಂತಿ ಗ್ರಾಮ)ದಲ್ಲಿ ಯೋಗಿ ದ್ಯಾವಪ್ಪ ತಾತನವರ ಆರಾಧನಾ ಮಹೋತ್ಸವ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಮಹೋತ್ಸವ, ಜಿಲ್ಲಾ ಮಟ್ಟದಲ್ಲಿ…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel

Google ನಲ್ಲಿ ನಮ್ಮ ಸುದ್ದಿ ಹೆಚ್ಚು ನೋಡಲು

⭐ Add Sidlaghatta as a preferred source on Google
Exit mobile version