Home News ನೂತನ ಸಭಾಂಗಣ ಭವನ ಕಟ್ಟಡವನ್ನು ಉದ್ಘಾಟನೆ

ನೂತನ ಸಭಾಂಗಣ ಭವನ ಕಟ್ಟಡವನ್ನು ಉದ್ಘಾಟನೆ

0

ಗುಣಮಟ್ಟದ ಹಾಲು ಉತ್ಪಾದನೆ ಮಾಡಿದಾಗ ಮಾತ್ರ ಹಾಲು ಉತ್ಪಾದಕ ಸಹಕಾರ ಸಂಘಗಗಳು ಲಾಭಗಳಿಸಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಸಂಸದ ಕೆ.ಎಚ್ ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೀರೆಬಲ್ಲ ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ ಸಂಘದಿಂದ ನಿರ್ಮಿಸಿದ ನೂತನ ಸಭಾಂಗಣ ಭವನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆ.ಸಿ ವ್ಯಾಲಿ ಯೋಜನೆಯಲ್ಲಿ ಮುಂದಿನ ೫ ವರ್ಷಗಳಲ್ಲಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಆಗಲಿದೆ. ಅದಕ್ಕೂ ಮೊದಲು ಕೆರೆಕಟ್ಟೆಗಳನ್ನು, ರಾಜಕಾಲುವೆಗಳ ಅಬಿವೃದ್ಧಿಗೆ ಸುಮಾರು ೧,೩೦೦ ಕೋಟಿಯಷ್ಟು ಹಣದ ಅವಶ್ಯಕತೆಯಿದ್ದು, ಹಣಕ್ಕಾಗಿ ಸರ್ಕಾರದ ಮುಂದೆ ಬೇಡಿಕೆ ಇಟ್ಟಿರುವುದಾಗಿ ಹೇಳಿದರು.
ಶಾಸಕ ವಿ.ಮುನಿಯಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಹಾಲು ತುಂಬಾ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿದ್ದು, ಹಾಲು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಣೆ ಮಾಡಬೇಕಾದ ಅವಶ್ಯಕತೆ ಇದೆ. ಗುಣಮಟ್ಟದ ಹಾಲನ್ನು ಉತ್ಪಾದನೆ ಮಾಡಿ ಎಂದು ತಿಳಿಸಿದರು.
ಮಳೆಗಾಲ ಪ್ರಾರಂಭವಾಗಿದೆ. ಸರ್ಕಾರ ರೈತರಿಗೆ ಬೇಕಾದ ಬಿತ್ತನೆ ಬೀಜಗಳ ವ್ಯವಸ್ಥೆ ಮಾಡಿದೆ. ಆಧುನಿಕ ತಂತ್ರಜ್ಞಾನ ಬಳಸಿ ಕಡಿಮೆ ನೀರಿನಲ್ಲಿ ಬೆಳೆಗಳನ್ನು ತೆಗೆದು ಲಾಭಗಳಿಸಿ, ತೋಟಗಾರಿಕೆ ಅಧಿಕಾರಿಗಳಿಂದ ರೈತರಿಗೆ ಮಾಹಿತಿ ಲಭ್ಯವಿದ್ದು, ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಮುಂದೆ ಬನ್ನಿ ಎಂದು ತಿಳಿಸಿದರು.
ಕೋಲಾರ ಹಾಲು ಒಕ್ಕೂಟದ ಮಾಜಿ ಅದ್ಯಕ್ಷ ಕೆ.ಗುಡಿಯಪ್ಪ ಮಾತನಾಡಿ, ಬಜೆಟ್‌ನಲ್ಲಿ ಸರ್ಕಾರ ಕೋಲಾರ ಜಿಲ್ಲೆಗೆ ಅನ್ಯಾಯ ಮಾಡಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಹಾಲು ಉತ್ಪಾದಕ ಸಂಘಗಳಿಗೆ ಅನುದಾನ ನೀಡದೆ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ನಿರ್ಮಲ ಮುನಿರಾಜು, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭೀಮೇಶ್, ಹೀರೆಬಲ್ಲೆ ಎಂ.ಪಿ.ಸಿ.ಎಸ್ ಅದ್ಯಕ್ಷ ಬಿ.ಟಿ ರವಿಕುಮಾರ್, ಚಿಕ್ಕಬಳ್ಳಾಪುರ ಸಹಕಾರ ಸಂಘಗಳ ಸಹಾಯಕ ನಿಭಂದಕ ನಾಗರಾಜ್ ಗೌಡ, ತಾಲ್ಲೂಕು ಪಂಚಾಯತ್ ಸದಸ್ಯೆ ಶೋಭಾ ಶಶಿಕುಮಾರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!