ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿಯ ಬೇಡಿಕೆಯ ಮೇರೆಗೆ ತಾಲ್ಲೂಕಿನಲ್ಲಿ ಕ್ರೀಡಾಭಿವೃದ್ಧಿ ಆಗಲೆಂದು ತಮ್ಮ ಅನುದಾನದಲ್ಲಿ ಹತ್ತು ಲಕ್ಷ ರೂಗಳನ್ನು ನೀಡುವುದಾಗಿ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.
ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿಯ ಸದಸ್ಯರಿಗೆ ಅನುದಾನ ನೀಡುವ ಪತ್ರವನ್ನು ಮಂಗಳವಾರ ಅವರು ನೀಡಿ ಮಾತನಾಡಿದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕ್ರೀಡಾಕ್ಷೇತ್ರ ಅಭಿವೃದ್ಧಿಯಾಗಬೇಕು. ಕ್ರೀಡಾಪಟುಗಳ ಹಾಗೂ ಸಾರ್ವಜನಿಕರ ಉಪಯೋಗಕ್ಕಾಗಿ ನಗರದ ನೆಹರೂ ಕ್ರೀಡಾಂಗಣಕ್ಕೆ ಬೇಕಾದ ಮೂಲಭೂತ ಸೌಕರ್ಯಗಳು ಕುಂಠಿತವಾಗಿರುವುದು ಗಮನಕ್ಕೆ ಬಂದಿದೆ. ನನ್ನ ಎಂ.ಪಿ.ಎಲ್.ಎ.ಡಿ ಅನುದಾನದಲ್ಲಿ ಮಲ್ಟಿ ಜಿಮ್ ಅಳವಡಿಸಿ ಹಾಗೂ ನಡೆದಾಡುವ ವಾಕರ್ಸ್ ಪಾಥ್ ಅಳವಡಿಸಿ. ಹಣವನ್ನು ಸದುಪಯೋಗಪಡಿಸಿಕೊಳ್ಳಬೇಕು. ಗುಣಮಟ್ಟದ ಕಾಮಗಾರಿ ನಡೆಯುವಂತೆ ಗಮನಿಸಿಕೊಳ್ಳಬೇಕು ಎಂದು ಹೇಳಿದರು.
ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಎಸ್.ವಿ.ನಾಗರಾಜರಾವ್, ಅಧ್ಯಕ್ಷ ಎನ್.ಆರ್.ನಿರಂಜನ್, ಪ್ರಧಾನ ಕಾರ್ಯದರ್ಶಿ ಜೆ.ವಿ.ಸುರೇಶ್, ನಗರಸಭಾ ಸದಸ್ಯ ಬಾಲಕೃಷ್ಣ, ಹಫೀಜುಲ್ಲಾ, ಜಗದೀಶ್, ಮುನಿಕೃಷ್ಣಪ್ಪ, ಮುರಳಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -







