ಪಲ್ಸ್ ಪೋಲಿಯೋ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನಾದ್ಯಂತ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೋಷಕರು ಭಾಗಿಯಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‍ಕುಮಾರ್ ಹೇಳಿದರು.

 ತಾಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಬಲ್ಲ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ 2 ನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗ್ರಾ.ಪಂ ಅಧ್ಯಕ್ಷೆ ಉಮಾ ರವಿಕುಮಾರ್ ಚಾಲನೆ ನೀಡಿದರು. ಆಶಾ ಕಾರ್ಯಕರ್ತೇ ಪ್ರಭಾವತಿ, ಅಂಗನವಾಡಿ ಶಿಕ್ಷಕಿ ವಿಮಲಮ್ಮ, ಪಾರ್ವತಮ್ಮ ಮತ್ತಿತರರು ಹಾಜರಿದ್ದರು.
ತಾಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಬಲ್ಲ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ 2 ನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗ್ರಾ.ಪಂ ಅಧ್ಯಕ್ಷೆ ಉಮಾ ರವಿಕುಮಾರ್ ಚಾಲನೆ ನೀಡಿದರು. ಆಶಾ ಕಾರ್ಯಕರ್ತೇ ಪ್ರಭಾವತಿ, ಅಂಗನವಾಡಿ ಶಿಕ್ಷಕಿ ವಿಮಲಮ್ಮ, ಪಾರ್ವತಮ್ಮ ಮತ್ತಿತರರು ಹಾಜರಿದ್ದರು.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ 2 ನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆ ಉಂಟು ಮಾಡಿ, ದೀರ್ಘಕಾಲ ಭೀಕರ ಪರಿಣಾಮ ಬೀರುವ ಪೋಲಿಯೋ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ದೇಶವನ್ನು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಯ ಶ್ರೀನಿವಾಸ್, ಅಕ್ಕಲರೆಡ್ಡಿ, ವಿಜಯಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ತಾಲೂಕಿನ ಜಂಗಮಕೋಟೆ, ಮೇಲೂರು, ಮಳ್ಳೂರು, ನಾಗಮಂಗಲ, ಅಬ್ಲೂಡು, ಸೇರಿದಂತೆ ವಿವಿಧ ಕಡೆ ಪಲ್ಸ್ ಪೋಲೀಯೋ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!