ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ 2016–17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಗ ಗಳಿಸಿರುವ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು 2 ಭಾವಚಿತ್ರಗಳು, ಮುಖ್ಯ ಶಿಕ್ಷಕರು ಅಥವಾ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ಸ್ವವಿರದ ಅರ್ಜಿಯನ್ನು ಜೂನ್ 25 ರೊಳಗೆ ಖುದ್ದು ಅಥವಾ ಅಂಚೆ ಮೂಲಕ ಕರ್ನಾಟಕ ಪ್ರದೇಶ ಕುರುಬರ ಸಂಘ, 9, ಕನಕದಾಸ ವೃತ್ತ, ಕಾಳಿದಾಸ ಮಾರ್ಗ, ಗಾಂಧಿನಗರ, ಬೆಂಗಳೂರು – 560009, ಅಥವಾ ಶಿಡ್ಲಘಟ್ಟ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ. ಮಂಜುನಾಥ (9448310784), ಕಾರ್ಯದರ್ಶಿ ಎಂ. ರಾಮಾಂಜಿ (9880857814) ಸಂಪರ್ಕಿಸತಕ್ಕದ್ದು ಎಂದು ನೀಡತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.