Home News ಫಲಾನುಭವಿಗಳಿಗೆ ಗ್ಯಾಸ್‌ ಸಂಪರ್ಕ

ಫಲಾನುಭವಿಗಳಿಗೆ ಗ್ಯಾಸ್‌ ಸಂಪರ್ಕ

0

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್‌ ಸಂಪರ್ಕ ನೀಡಲಾಗುತ್ತಿದೆ ಎಂದು ಶ್ರೀ ವೆಂಕಟೇಶ್ವರ್ ಇಂಡೇನ್ ಗ್ಯಾಸ್ ಏಜೆನ್ಸಿಯ ಮಾಲೀಕ ನಾಗರಾಜ್‌ ತಿಳಿಸಿದರು.
ನಗರದ ಇಂಡೇನ್ ಗ್ಯಾಸ್ ಏಜೆನ್ಸಿಯ ಕಚೇರಿಯಲ್ಲಿ ಗುರುವಾರ ಫಲಾನುಭವಿಗಳಿಗೆ ಗ್ಯಾಸ್‌ ಸಂಪರ್ಕದ ದಾಖಲೆ, ಸ್ಟೌ ಹಾಗೂ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಯೋಜನೆಯಡಿ ಕೇಂದ್ರ ಸರ್ಕಾರ ಬಿಪಿಎಲ್‌ ಕುಟುಂಬಗಳಿಗೆ 1.600 ರೂ ದರದಲ್ಲಿ ಹೊಸ ಅನಿಲ ಸಂಪರ್ಕ ಕಲ್ಪಿಸಲು ಮುಂದಾಗಿದೆ. ರಾಜ್ಯ ಸರ್ಕಾರ 1 ಸಾವಿರ ರೂ ಮೊತ್ತವನ್ನು ಅರ್ಹ ಫಲಾನುಭವಿಗೆ ನೀಡಲಿದೆ. ಒಟ್ಟು 2.600 ರೂ ಮೊತ್ತದಲ್ಲಿ ಸಂಪರ್ಕ ದೊರೆಯಲಿದೆ.
ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು 18 ವರ್ಷ ತುಂಬಿದ ಕುಟುಂಬದ ಎಲ್ಲಾ ಸದಸ್ಯರ ಆಧಾರ್‌ ಕಾರ್ಡ್‌ಗಳ ನಕಲು, ಬ್ಯಾಂಕಿನ ಪಾಸ್‌ಪುಸ್ತಕ, ವಿದ್ಯುತ್‌ ಬಿಲ್, ಪಾಸಪೋರ್ಟ್ ಫೋಟುಗಳೊಂದಿಗೆ ಅರ್ಜಿಗಳನ್ನು ಸ್ವೀಕರಿಸಿದ್ದು, ಅರ್ಹ ಫಲಾನುಭವಿಗಳಿಗೆ ಗ್ಯಾಸ್‌ ಸಂಪರ್ಕವನ್ನು ನೀಡಲಾಗುತ್ತಿದೆ.
ತಾಲ್ಲೂಕಿನ ಸೊಣ್ಣೇನಹಳ್ಳಿ, ಮರಿಹಳ್ಳಿ, ಗಡಿಮಿಂಚೇನಹಳ್ಳಿ ಮುಂತಾದ ಗ್ರಾಮದ ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಕಾಶ್‌, ರಮೇಶ್‌, ಅಣ್ಣಪ್ಪ ಹಾಜರಿದ್ದರು.

error: Content is protected !!