27 C
Sidlaghatta
Sunday, February 22, 2026

ಬಚ್ಚನಹಳ್ಳಿ ಶಾಲೆಯಲ್ಲಿ ಶಾರದ ಪೂಜೆ

- Advertisement -
- Advertisement -

ತಾಲ್ಲೂಕಿನ ಬಚ್ಚನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾರದ ಪೂಜೆ, ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಿಗೆ ಗೌರವ ಸಮರ್ಪಣೆ ಮತ್ತು ಸಹಶಿಕ್ಷಕರಿಗೆ ಬಿಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸುಬ್ಬಣ್ಣ ಮಾತನಾಡಿ, ‘ಪುಟ್ಟ ಗ್ರಾಮವಾದ ಬಚ್ಚನಹಳ್ಳಿ ಶಾಲೆಯಲ್ಲಿ ಒಂದರಿಂದ ಐದನೇ ತರಗತಿವರೆಗೆ ೧೫ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸ್ವರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂದಿನ ಉನ್ನತ ವಿದ್ಯಾಭ್ಯಾಸವನ್ನು ಕಿತ್ತೂರುರಾಣಿ ಚನ್ನಮ್ಮ, ನವೋದಯ, ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ, ವಿದ್ಯಾರ್ಥಿಗಳ ಪೋಷಕರು ಮಕ್ಕಳ ಪ್ರಗತಿಯನ್ನು ಗಮನಿಸುತ್ತಿರಬೇಕು’ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ಬಣ್ಣ ತಮ್ಮ ಸ್ವಂತ ಖರ್ಚಿನಿಂದ ಶಾಲೆಗೆ ವಾಟರ್ ಪಿಲ್ಟರ್ನ್ನು ಕೊಡುಗೆಯಾಗಿ ನೀಡಿದ್ದರಿಂದ ಗ್ರಾಮದ ಜನರು ಮತ್ತು ಶಾಲೆಯ ಶಿಕ್ಷಕ ವೃಂದ ಅವರಿಗೆ ಸನ್ಮಾನ ಮಾಡುವುದರ ಮೂಲಕ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಲೆಯಲ್ಲಿ ಕಾರ್ಯನಿರ್ವಹಿಸಿ ಬೇರೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಶಶಿಕಲಾ ಅವರನ್ನು ಸನ್ಮಾನಿಸಿ ಬಿಳ್ಕೊಡಲಾಯಿತು.
ಗ್ರಾಮ ಪಂಚಾಯತಿ ಸದಸ್ಯ ಪ್ರಸನ್ನ, ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ, ನಾಗರಾಜಯ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!