ಬದಲಾಗುತ್ತಿರುವ ಜೀವನ ಶೈಲಿ ಹಾಗೂ ಆಹಾರ ಪದ್ದತಿಯಿಂದಾಗಿ ಈಚೆಗೆ ವಿವಿಧ ರೀತಿಯ ಖಾಯಿಲೆಗಳು ಬರುತ್ತಿದ್ದು ಇವುಗಳನ್ನು ತಡೆಗಟ್ಟಲು ಯೋಗ ತುಂಬಾ ಸಹಕಾರಿಯಾಗಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತುಮಕೂರು ವಿಭಾಗದ ಗ್ರಾಮವಿಕಾಸ್ ಪ್ರಮುಖ್ ರಾಜಮೋಹನ್‌ಜಿ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯೋಗ ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಹುಟ್ಟಿ ಬೆಳೆದದ್ದು ಇದೀಗ ಇಡೀ ವಿಶ್ವವೆಲ್ಲಾ ಅದನ್ನೊಪ್ಪಿಕೊಂಡು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುತ್ತಿದೆ. ಹಾಗಾಗಿ ಯುವಪೀಳಿಗೆ ಮುಂದಿನ ದಿನಗಳಲ್ಲಿ ಆರೋಗ್ಯವಂತ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಯೋಗವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಾಲ್ಲೂಕು ಬೌದ್ದಿಕ್ ಪ್ರಮುಖ್ ನಾಗರಾಜ್‌ಜಿ ಮಾತನಾಡಿ, ಯೋಗವನ್ನು ಮಾಡುವುದರಿಂದ ದೈಹಿಕವಾಗಿ ಸಮತೋಲನ ಕಾಪಾಡಿಕೊಳ್ಳುವುದರ ಜೊತೆಗೆ, ಮಾನಸಿಕವಾಗಿ ನೆಮ್ಮದಿಯನ್ನು ಕಾಣಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಪ್ರಮುಖವಾಗಿ ಯುವಜನತೆ ತಮ್ಮ ಜೀವನದುದ್ದಕ್ಕೂ ಯೋಗವನ್ನು ಒಂದು ಹವ್ಯಾಸವನ್ನಾಗಿ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಯೋಗ ಕಾರ್ಯಕ್ರಮದಲ್ಲಿ ಸುಮಾರು ೧೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ತಾಡಾಸನ, ಅರ್ಧಚಂದ್ರಾಸನ, ಪದ್ಮಾಸನ, ಅರ್ಧಕಟ್ಟಿ ಚಕ್ರಾಸನ, ವೃಕ್ಷಾಸನ, ಸೇರಿದಂತೆ ವಿವಿಧ ಆಸನಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಮಕ್ಕಳಿಗೆ ರಾಜಮೋಹನ್‌ಜಿ ಯೋಗಾಭ್ಯಾಸ ಮಾಡಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆನಂದ್, ಪ್ರಭಾರಿ ಪ್ರಾಂಶುಪಾಲ ಸಿ.ವೆಂಕಟಶಿವಾರೆಡ್ಡಿ, ಪ್ರಾಧ್ಯಾಪಕರಾದ ಎಚ್.ಸಿ.ಮುನಿರಾಜು, ಸಿಎಂಟಿ ಕಂಪ್ಯೂಟರ್ಸ್‌ನ ರಮೇಶ್, ಸರ್ವೋದಯ ಸ್ವಯಂ ಸೇವಾ ಸಂಸ್ಥೆಯ ಕೆ.ನರೇಶ್‌ಕುಮಾರ್, ಮಂಜುನಾಥ್, ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಎಸ್.ವಿ.ನಾಗರಾಜ್‌ರಾವ್, ಎ.ಎಂ.ತ್ಯಾಗರಾಜ್, ಕೆ.ಅಶ್ವಥ್ ಹಾಜರಿದ್ದರು.
- Advertisement -
- Advertisement -
- Advertisement -