24.1 C
Sidlaghatta
Wednesday, December 24, 2025

ಬಿಜೆಪಿಯ ಎರಡು ಬಣಗಳಿಂದ ಸಂಭ್ರಮಾಚರಣೆ

- Advertisement -
- Advertisement -

ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ನೋಟು ಅಮಾನ್ಯೀಕರಣ ನಿರ್ಧಾರವನ್ನು ಬೆಂಬಲಿಸಿ ಶಿಡ್ಲಘಟ್ಟ ತಾಲ್ಲೂಕು ಬಿಜೆಪಿ ಪದಾಧಿಕಾರಿಗಳು ಬುಧವಾರ ಆಚರಿಸಿದರು. ಆದರೆ ಎರಡು ಭಾಗಗಳಾಗಿ ವಿಂಗಡನೆಯಾಗುವ ಮೂಲಕ ತಮ್ಮಲ್ಲಿರುವ ಬಿನ್ನಮತವನ್ನು ಹೊರಹಾಕಿ ಆಚರಿಸಿದ್ದು ವಿಶೇಷವಾಗಿತ್ತು.
ಒಂದೆಡೆ ತಾಲ್ಲೂಕು ಬಿಜೆಪಿ ಪಕ್ಷದ ಅಧ್ಯಕ್ಷ ಬಿ.ಸಿ.ನಂದೀಶ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಪದಾಧಿಕಾರಿಗಳೊಂದಿಗೆ ನಗರದ ಕೋಟೆ ವೃತ್ತದಲ್ಲಿ ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಾಚರಣೆ ನಡೆಸಿದರೆ, ಮತ್ತೊಂದೆಡೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಟಿ.ಎಸ್.ಭಾಸ್ಕರರೆಡ್ಡಿ ನೇತೃತ್ವದಲ್ಲಿ ಜಿಲ್ಲಾ ಕಾರ್ಯದರ್ಶಿ ಶ್ರೀಧರ್ ಮತ್ತಿತರರು ಸರ್ಕಾರಿ ಅಧಿಕಾರಿಗಳಿಗೆ ಅಭಿನಂದನಾ ಪತ್ರ ಸಲ್ಲಿಸುವ ಕಾರ್ಯಕ್ರಮ ಏರ್ಪಡಿಸಿದ್ದರು.
ತಾಲ್ಲೂಕಿನಲ್ಲಿ ತನ್ನ ಅಸ್ಥಿತ್ವವನ್ನು ಕಂಡುಕೊಳ್ಳಲು ಶ್ರಮಿಸುತ್ತಿರುವ ಬಿಜೆಪಿ ಪಕ್ಷ ಈ ಬಾರಿಯಾದರೂ ಒಗ್ಗಟ್ಟಾಗಿರಲಿ. ಮುಂದಿನ ವಿದಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಒಗ್ಗಟ್ಟಾಗಿ ದುಡಿಯಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ಪಕ್ಷದ ಕಾರ್ಯಕರ್ತರ ಆಸೆಗೆ ಚುನಾವಣೆಗೂ ಮುನ್ನವೇ ತಾಲ್ಲೂಕು ಬಿಜೆಪಿಯಲ್ಲಿ ಎರಡು ಬಣಗಳಿರುವುದನ್ನು ಕಂಡು ಬೇಸರಗೊಂಡಿದ್ದಾರೆ.
ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್ ನೇತೃತ್ವದಲ್ಲಿ ಸುರೇಂದ್ರಗೌಡ, ಶ್ರೀರಾಮರೆಡ್ಡಿ, ಧಾಮೋದರ್, ಮುನಿರಾಜು, ಸುಜಾತಮ್ಮ, ಬೈರಾರೆಡ್ಡಿ, ಪುರುಷೋತ್ತಮ್, ಮುನಿರಾಜು (ಕುಟ್ಟಿ), ನಗರದ ಅಶೋಕ ರಸ್ತೆಯ ಶ್ರೀ ಬಸವೇಶ್ವರ ದೇವಾಲಯದ ಆವರಣದಿಂದ ಕೋಟೆ ವೃತ್ತದವರೆಗೂ ಮೆರವಣಿಗೆ ನಡೆಸಿ ಕೋಟೆ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿಯ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಭಾಸ್ಕರರೆಡ್ಡಿ ನೇತೃತ್ವದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರ್, ಯಣ್ಣೂರು ರಾಮಕೃಷ್ಣಪ್ಪ, ದೇವರಮಳ್ಳೂರು ರೆಡ್ಡಿಸ್ವಾಮಿ, ಯುವಮೋರ್ಚಾ ಅಧ್ಯಕ್ಷ ಬೈರಾರೆಡ್ಡಿ ಗ್ರೇಡ್ ೨ ತಹಸೀಲ್ದಾರ್ ಮುನಿಕೃಷ್ಣಪ್ಪ ಅವರಿಗೆ ಹಾಗೂ ವಿವಿಧ ಬ್ಯಾಂಕ್ ವ್ಯವಸ್ಥಾಪಕರಿಗೆ ಅಭಿನಂದನೆ ಪತ್ರ ಸಲ್ಲಿಸಿದರು.
 

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!