ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯ ಹೆಚ್ಚಿಸಲಾಗುವುದು

- Advertisement -
- Advertisement -

ಬಿಜೆಪಿ ಪಕ್ಷವನ್ನು ತಾಲ್ಲೂಕಿನಲ್ಲಿ ಪ್ರಬಲವಾಗಿ ಕಟ್ಟಿ ಬೆಳೆಸಲು ಪಣ ತೊಟ್ಟಿದ್ದೇನೆ, ಪ್ರಾಮಾಣಿಕವಾಗಿ ಕೆಲಸವನ್ನು ಮಾಡುತ್ತೇನೆ. ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಬಿಜೆಪಿ ಪಕ್ಷದ ನೂತನ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ಬುಧವಾರ ನೂತನ ಪದಾಧಿಕಾರಿಗಳೊಂದಿಗೆ ಹಾಗೂ ಕಾರ್ಯಕರ್ತರೊಡನೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ವಿವಿಧ ಶಿಬಿರಗಳು ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ರಾಜ್ಯ ಮಟ್ಟದ ನಾಯಕರನ್ನು ಕರೆಸಿ ಸ್ಥಳೀಯ ಕಾರ್ಯಕರ್ತರ ಪಡೆಗೆ ಪ್ರೋತ್ಸಾಹ ಮತ್ತು ಉತ್ಸಾಹವನ್ನು ತುಂಬಲಾಗುವುದು. ಬಿಜೆಪಿ ಪಕ್ಷಕ್ಕೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದು, ಅವರನ್ನು ಗಟ್ಟಿಗೊಳಿಸಲು ಯುವಚೈತನ್ಯ ಎಂಬ ಕಾರ್ಯಕ್ರಮವನ್ನು ನಡೆಸಲಾಗುವುದು. ಬಿಜೆಪಿ ಪಕ್ಷದ ಸಿದ್ಧಾಂತದಂತೆ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಹೊಸ ಕಾರ್ಯಪಡೆಯನ್ನು ಬೆಳೆಸುವಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಘಟಕದ ನೂತನ ಸದಸ್ಯರಿಂದ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆಯನ್ನು ನೆರವೇರಿಸಲಾಯಿತು.
ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ತರಬಳ್ಳಿ ಭಸ್ಕರ್ ರೆಡ್ಡಿ, ಮುನಿರಾಜು, ನಗರ ಸಭೆಯ ಸದಸ್ಯ ಎಸ್.ರಾಘವೇಂದ್ರ, ದೊಣ್ಣಹಳ್ಳಿ ರಾಮಣ್ಣ, ದಾಮೋದರ್‌, ಸುರೇಶ್, ಅಷ್ವಕ್, ಸುಜಾತಮ್ಮ, ರತ್ನಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!