ಡಿವೈಎಸ್ಪಿ ಗಣಪತಿ ಹತ್ಯೆಯ ಹಿಂದೆ ಸಚಿವ ಕೆ.ಜೆ.ಜಾರ್ಜ್ ಹೆಸರು ಹಾಗೂ ದಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ರ ಹತ್ಯೆಯ ಪ್ರಕರಣದಲ್ಲಿ ಕೇಳಿಬರುತ್ತಿರುವ ಸಚಿವ ವಿನಯ್ಕುಲಕರ್ಣಿ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಒತ್ತಾಯಿಸಿದರು.
ತಾಲ್ಲೂಕು ಬಿಜೆಪಿ ಪಕ್ಷದ ವತಿಯಿಂದ ಬುಧವಾರ ನಗರದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ತಹಸೀಲ್ದಾರ್ ಮುಖಾಂತರ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಇಬ್ಬರು ಪ್ರಭಾವಿ ಸಚಿವರು ವಿವಿಧ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಸಚಿವರ ಪರ ಕೈ ಜೋಡಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹಾಗಾಗಿ ಕೂಡಲೇ ಈ ಇಬ್ಬರು ಸಚಿವರನ್ನು ಸಚಿವ ಸ್ಥಾನದಿಂದ ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಗ್ರೇಡ್ ೨ ತಹಸೀಲ್ದಾರ್ ಮುನಿಕೃಷ್ಣಪ್ಪ ಮುಖಾಂತರ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎಸ್.ರಾಘವೇಂದ್ರ, ಮುಖಂಡರಾದ ಶ್ರೀರಾಮರೆಡ್ಡಿ, ದಾಮೋದರ್, ಮಂಜುಳಮ್ಮ, ಶಿವಮ್ಮ, ಸುಶೀಲಮ್ಮ, ಮುನಿರಾಜು (ಕುಟ್ಟಿ) ಹಾಜರಿದ್ದರು.
- Advertisement -
- Advertisement -
- Advertisement -