ಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ

- Advertisement -
- Advertisement -

ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಂಗೋಪವಾಗಿ ನಡೆಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.
ರಥೋತ್ಸವ ಅಂಗವಾಗಿ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಬತ್ತಾಸು, ಸಿಹಿ ಖಾರದ ತಿಂಡಿಗಳು, ವಿವಿಧ ಹಣ್ಣುಗಳು, ತಂಪು ಪಾನೀಯ, ಕರಿದ ತಿಂಡಿ ತಿನಿಸು, ಮಕ್ಕಳಿಗೆ ಆಟಿಕೆ, ಅಚ್ಚೆ ಹಾಕುವವರು, ಬಳೆಗಾರರು ಉತ್ಸವಕ್ಕೆ ರಂಗು ತುಂಬಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ವಿತರಿಸಲಾಯಿತು. ವಿವಿಧ ಗ್ರಾಮಸ್ಥರು ಹೆಸರುಬೇಳೆ ಪಾನಕ ವಿತರಿಸಿದರು. ಅನ್ನಸಂತರ್ಪಣೆ ನಡೆಯಿತು.
ವಿಜಯನಗರ ಕಾಲದ ಬ್ಯಾಟರಾಯಸ್ವಾಮಿ ದೇವಾಲಯವು ಎತ್ತರವಾದ ಗುಡ್ಡದ ಮೇಲಿರುವುದರಿಂದ ಕಂಗೊಳಿಸುತ್ತಿತ್ತು. ಶಿಲ್ಪಕಲಾ ದೃಷ್ಟಿಯಿಂದ ಅತ್ಯಂತ ಆಕರ್ಷಕ ಕಲಾನೈಪುಣ್ಯತೆ ಹೊಂದಿದೆ. ಬ್ಯಾಟರಾಯನ ಉತ್ಸವಮೂರ್ತಿ ಜತೆಗೆ ಶ್ರೀದೇವಿ ಭೂದೇವಿ ಅವರ ಸುಂದರ ಶಿಲ್ಪಗಳಿವೆ.
‘ಪ್ರತಿ ವರ್ಷ ಕಾಮನ ಹುಣ್ಣಿಮೆಯಂದು ಇಲ್ಲಿ ರಥೋತ್ಸವ ನಡೆಯುತ್ತದೆ. ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಭಕ್ತರು ಈ ದೇವಾಲಯದಲ್ಲಿ ಪ್ರಸಾದ ಕೇಳುವುದು ರೂಢಿ. ಮನೆಗೆ ಹೆಣ್ಣು ತರಲು, ಹೆಣ್ಣು ಕೊಡಲು, ಬಾವಿ ತೋಡಲು, ಕೊಳವೆ ಬಾವಿ ಕೊರೆಸಲು, ಭೂಮಿ ಕೊಳ್ಳಲು, ಮನೆ ಕಟ್ಟಲು ಮುಂತಾದ ಶುಭ ಕಾರ್ಯಗಳಿಗೆ ಬ್ಯಾಟರಾಯಸ್ವಾಮಿಯ ಪ್ರಸಾದ ಕೇಳುತ್ತಾರೆ’ ಎಂದು ಬ್ಯಾಟರಾಯಸ್ವಾಮಿ ದೇವಾಲಯ ಧರ್ಮದರ್ಶಿಯೊಬ್ಬರು ಹೇಳಿದರು.
ಸುತ್ತಮುತ್ತಲಿನ ಗ್ರಾಮಗಳು ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ನೂರಾರು ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು.
ರಥೋತ್ಸವಕ್ಕೆ ತಹಶೀಲ್ದಾರ್ ಅರುಂಧತಿ ಚಾಲನೆ ನೀಡಿದರು. ಗ್ರೇಡ್ 2 ತಹಶೀಲ್ದಾರ್ ಹನುಮಂತ ರಾವ್ , ಆರ್‌.ಐ.ವಿಶ್ವನಾಥ, ಬ್ಯಾಟರಾಯಶೆಟ್ಟಿ, ಗ್ರಾಮ ಪಂಚಾಯಿತಿ ‌ಅಧ್ಯಕ್ಷ ಪಾಪಣ್ಣ, ಶ್ರೀ ಬ್ಯಾಟರಾಯಸ್ವಾಮಿ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಶ್ರೀನಿವಾಸ್, ಧರ್ಮದರ್ಶಿ ಪುಟ್ಟರಾಜು, ಬೆಟ್ಟಕೋಟೆ ಹರೀಶ್, ತಾಳಂಕಿ ನರಸರಾಜಗುಪ್ತ ಕುಟುಂಬ, ದೇವಸ್ಥಾನದ ಧರ್ಮದರ್ಶಿಗಳಾದ ಚಿಕ್ಕ ಗಂಗಪ್ಪ ಕುಟುಂಬ, ಆಂಜಿನಪ್ಪ (ಪುಟ್ಟು), ಆನೂರು ದೇವರಾಜ್, ಮುಗಿಲಡಿಪಿ ಚಂದ್ರಪ್ಪ, ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ವೈಶಾಕ್, ಕೃಷ್ಣಮೂರ್ತಿ, ಎಂ. ಎಚ್. ರಾಮಾಂಜಿನಪ್ಪ, ಸುನೀಲ್ ಕುಮಾರ್, ದಾಮೋದರ್, ರಾಜಣ್ಣ, ನಂಜಪ್ಪ, ಎನ್. ದೇವರಾಜ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!