ಭಗೀರಥ ಜಯಂತ್ಯತ್ಸವವನ್ನು ಅದ್ದೂರಿಯಾಗಿ ವರ್ಷಕ್ಕೊಮ್ಮೆ ಆಚರಿಸಿದರೆ ಸಾಲದು ಬದಲಿಗೆ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ಭಗೀರಥ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಮುದಾಯದ ಸಂಘಟನೆ ಮಾಡುವುದರೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ಸಮುದಾಯದ ಮುಖಂಡರು ಮಾಡಬೇಕು ಎಂದರು.
ಶೈಕ್ಷಣಿಕವಾಗಿ ಹಾಗು ಸಾಮಾಜಿಕವಾಗಿ ಹಿಂದುಳಿದಿರುವ ಉಪ್ಪಾರ ಸಮುದಾಯದವರು ಭಗೀರಥರಂತೆ ಎಲ್ಲವನ್ನು ಸಾಧಿಸಿ ತೋರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಜನಾಂಗದ ಮುಖಂಡರೂ ಸೇರಿದಂತೆ ತಾಲೂಕು ಆಡಳಿತದ ವತಿಯಿಂದ ಪೂಜೆ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಸಮುದಾಯದ ಹಿರಿಯ ಮುಖಂಡರೂ ಸೇರಿದಂತೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ನಗರಸಭೆ ಅಧ್ಯಕ್ಷ ಅಪ್ಸರ್‍ಪಾಷ, ತಾ.ಪಂ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಉಪಾಧ್ಯಕ್ಷ ಹೆಚ್.ನರಸಿಂಹಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೇಶವರೆಡ್ಡಿ, ರಾಜಸ್ವ ನಿರೀಕ್ಷಕ ಮೋಹನ್, ಭಗೀರಥ ಉಪ್ಪಾರ ಮಹಾಸಭಾ ತಾಲ್ಲೂಕು ಅಧ್ಯಕ್ಷ ಟಿ.ಗಂಗಪ್ಪ, ನರಸಿಂಹಪ್ಪ, ವೆಖಟರೋಣಪ್ಪ, ಕೋಲಾರ ರಾಮಯ್ಯ, ಚಿಕ್ಕ ಚೋಳರಪ್ಪ, ವೆಂಕಟೇಶ್ ಕುಮಾರ, ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







