Home News ಮಾರ್ಚ್‌ 10 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮಾರ್ಚ್‌ 10 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

0

ಕನ್ನಡ ಸಾಹಿತ್ಯ ಪರಿಷತ್ತು ಶಿಡ್ಲಘಟ್ಟ ತಾಲ್ಲೂಕು ಘಟಕದಿಂದ ಆರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್‌ 10 ರ ಶುಕ್ರವಾರ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಲು ಕಸಾಪ ತಾಲ್ಲೂಕು ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ತೀರ್ಮಾನಿಸಿರುವುದಾಗಿ ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲು ತಾಲ್ಲೂಕಿನ ಎಲ್ಲ ನಾಗರಿಕರು ಮತ್ತು ಕನ್ನಡಾಭಿಮಾನಿಗಳು ಸಹಕರಿಸಬೇಕೆಂದು ಕೋರಿದ್ದಾರೆ.

error: Content is protected !!