Home News ಮೇಲೂರು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೇಲೂರು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0

ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವನ್ನು ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು.
ಶಾಲೆಯಲ್ಲಿ ಎಂದಿನಂತೆ ರಾಷ್ಟ್ರಗೀತೆಯ ನಂತರ ಶಾಲೆಯ ಕನ್ನಡ ಶಿಕ್ಷಕಿ ವಿದ್ಯಾ ಅವರು ರಚಿಸಿದ್ದ ವಿಜ್ಞಾನಿ ಸರ್ ಸಿ ವಿ ರಾಮನ್ ಕುರಿತಾದ ಕವನವನ್ನು ವಿದ್ಯಾರ್ಥಿಗಳು ಜೊತೆಗೂಡಿ ಹಾಡಿದರು.
ಒಂಬತ್ತನೇ ತರಗತಿಯ ವಿದ್ಯಾರ್ಥಿಗಳು ಗ್ರೀಸ್ ದೇಶದ ಪ್ರತಿಭಾವಂತ ಗಣಿತಶಾಸ್ತ್ರಜ್ಞ, ಸಂಶೋಧಕ ಆರ್ಕಿಮಿಡೀಸ್‌ ಕುರಿತಂತೆ ನಾಟಕವನ್ನು ಪ್ರದರ್ಶಿಸಿದರು. ವಿಜ್ಞಾನ ಪ್ರಯೋಗಗಳನ್ನು ಹಾಗೂ ವಿಜ್ಞಾನದ ರಸನಿಮಿಷಗಳು ಕುರಿತಂತೆ ವಿವಿಧ ಸಂಗತಿಗಳನ್ನು ವಿದ್ಯಾರ್ಥಿಗಳು ವಿವರಿಸಿದರು.
ವಿಜ್ಞಾನ ಶಿಕ್ಷಕಿ ಜಿ.ಸವಿತಾ ಮತ್ತು ಶಿಕ್ಷಕಿ ತುಳಸಿಮಾಲ ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಮತ್ತು ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ವೈಜ್ಞಾನಿಕ ಅನ್ವೇಷಣೆಯ ಬಗ್ಗೆ ವಿವರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಮುಖ್ಯಶಿಕ್ಷಕ ಗಂಗಪ್ಪ, ಶಿಕ್ಷಕರಾದ ಗಾಯತ್ರಿ, ವೆಂಕಟಶಿವಾರೆಡ್ಡಿ, ಸುಜಾತ, ಉದಯಶಂಕರ್ ಹಾಜರಿದ್ದರು.

error: Content is protected !!