ರಾಘವೇಂದ್ರಸ್ವಾಮಿಯವರ 345ನೇ ಆರಾಧನಾ ಮಹೋತ್ಸವ

- Advertisement -
- Advertisement -

ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ದೇವಾಲಯದಲ್ಲಿ ಶನಿವಾರ ರಾಘವೇಂದ್ರಸ್ವಾಮಿಯವರ 345ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಶುಕ್ರವಾರ ಪ್ರಾರಂಭವಾಯಿತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆದು ಸಂಜೆ ಗಾಯಿತ್ರಿ ಮಹಿಳಾ ಮಂಡಳಿಯಿಂದ ಸ್ತೋತ್ರಗಳ ಗಾಯನ ಮತ್ತು ವಿದ್ವಾನ್ ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿಯವರಿಂದ ಸಂಗೀತ ಕಚೇರಿ ನಡೆಯಿತು.
ಶನಿವಾರ ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆಯ ನಂತರ ರಾಯರ ಉತ್ಸವವನ್ನು ನಗರದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ನಡೆಸಲಾಯಿತು. ಹಸ್ತೋದಕ, ಮಹಾಮಂಗಳಾರತಿಯ ನಂತರ ಬ್ರಾಹ್ಮಣರ ಸಂತರ್ಪಣೆಯನ್ನು ನಡೆಸಲಾಯಿತು.
‘ಸುಮಾರು 30 ವರ್ಷಗಳಿಂದಲೂ ನಗರದ ರಾಯರ ಮಠದಲ್ಲಿ ಮೂರು ದಿನಗಳ ಆರಾಧನೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ. ಪೂರ್ವಾರಾಧನೆ, ಮಧ್ಯಾರಾಧನೆ ಮತ್ತು ಉತ್ತರಾರಾಧನೆ ಎಂದು ಮೂರು ದಿನಗಳ ಕಾಲ ನಡೆಯುವ ಆರಾಧನೆಯಲ್ಲಿ ಹೋಮ ಹವನಗಳು, ರಾಯರ ಕಥೆಯನ್ನು ತಿಳಿಸುಕೊಡುವುದು, ವಿಶೇಷ ಪೂಜೆಗಳು, ಭಜನೆ, ಗೀತಗಾಯನಗಳನ್ನು ಆಯೋಜಿಸಲಾಗುತ್ತದೆ. ರಾಯರು ಭಕ್ತಿಯಿಂದ ಪೂಜಿಸುತ್ತಿದ್ದ ರಾಮ, ಕೃಷ್ಣ, ವೇದವ್ಯಾಸ, ಲಕ್ಷ್ಮೀನರಸಿಂಹ ಮತ್ತು ಹಯಗ್ರೀವ ದೇವರುಗಳನ್ನು ಪೂಜಿಸಲಾಗುತ್ತದೆ. ಸರ್ವರಿಗೂ ಸಲ್ಲುವ ರಾಯರ ಮಹಿಮೆಯನ್ನು ಎಲ್ಲರಿಗೂ ಸಾರುವ ಉದ್ದೇಶದಿಂದ ಸಂಜೆಗೆ ದೇವರನಾಮಗಳು ಹಾಗೂ ಶ್ರೀರಾಘವೇಂದ್ರ ವಿಜಯ ಹರಿಕಥೆಯನ್ನು ಆಯೋಜಿಸಿದ್ದೇವೆ. ಬುಧವಾರ ಸಂಜೆ ವಿದುಷಿ ವಿಜಯ ಡಿ.ಭಟ್ ಅವರ ಸಂಗೋತ ಕಚೇರಿ ಆಯೋಜಿಸಿದ್ದೇವೆ’ ಎಂದು ಬ್ರಾಹ್ಮಣ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಸ್.ರವಿ ತಿಳಿಸಿದರು. ಎಸ್.ವಿ.ನಾಗರಾಜರಾವ್, ಶ್ರೀಕಾಂತ್ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!