ಪೂರ್ಣ ಪುಟ · Open full page
News

ರೈತರ ಭೂಮಿಯನ್ನು ಉಳಿಸಿಕೊಳ್ಳಲು ಹಾಗೂ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ

ರೈತರ ಭೂಮಿಯನ್ನು ಉಳಿಸಿಕೊಳ್ಳಲು ಹಾಗೂ ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪಾದಯಾತ್ರೆಯನ್ನು ಕೈಗೊಂಡಿದ್ದು, ಏಪ್ರಿಲ್ 28 ರಂದು ವಿಧಾನಸೌಧಕ್ಕೆ ತೆರಳಿ ಪ್ರತಿಭಟಿಸುವುದಾಗಿ ಸಿ.ಐ.ಟಿ.ಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀದೇವಮ್ಮ ತಿಳಿಸಿದರು.
ನಗರದಲ್ಲಿ ಶನಿವಾರ ಘೋಷಣೆಗಳನ್ನು ಕೂಗುತ್ತಾ ರೈತರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಪಾದಯಾತ್ರೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ದೂರದೃಷ್ಟಿ ಯೋಜನೆಗಳನ್ನು ರೂಪಿಸಬೇಕು. ಭೂ ಸ್ವಾಧೀನ ಕಾಯ್ದೆ ವಾಪಸ್ ಪಡೆಯಬೇಕು. ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಡಿ.ವೈ.ಎಫ್.ಐ ರಾಜ್ಯ ಸಮಿತಿ ಸದಸ್ಯ ಮುನೀಂದ್ರ, ಫಯಾಜುಲ್ಲಾ, ಗುಲ್ಜಾರ್, ಮಂಜುನಾಥ್, ನರಸಿಂಹಪ್ಪ, ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಮುನಿಕೆಂಪಣ್ಣ, ಪ್ರತೀಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

📰 ಇದನ್ನೂ ಓದಿ

News

ಅಗ್ನಿಶಾಮಕದಳದ ಠಾಣೆಯ ಸುತ್ತ ನರೇಗಾ ಯೋಜನೆಯಲ್ಲಿ ಅಭಿವೃದ್ಧಿ

ಅಗ್ನಿಶಾಮಕ ಠಾಣೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಏನೇನು ಕಾಮಗಾರಿಗಳನ್ನು ಮಾಡಿಸಬಹುದೋ ಅವೆಲ್ಲಾ ಕಾಮಗಾರಿಗಳನ್ನು ಗ್ರಾಮಪಂಚಾಯಿತಿ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ನರೇಗಾ ಯೋಜನೆ ಸಹಾಯಕ ನಿರ್ದೇಶಕ…

News

ತಾಲ್ಲೂಕು ಮಟ್ಟದ 2015–16ನೇ ಸಾಲಿನ ಕ್ರೀಡಾಕೂಟದ ಫಲಿತಾಂಶ

ಪ್ರೌಢಶಾಲೆ ವಿಭಾಗ(ಬಾಲಕಿಯರು): 100 ಮೀಟರ್ ಓಟ: ಜೆ.ಪಿ.ಸಿಂಧೂ, ಜ್ಞಾನಜ್ಯೋತಿ ಜಂಗಮಕೋಟೆ(ಪ್ರಥಮ), ಮೇಘನಾ, ಸ.ಪ್ರೌ.ಶಾಲೆ ಚೀಮಂಗಲ(ದ್ವಿತೀಯ), ಹರ್ಷಿತಾ, ಬಿ.ಎಂ.ವಿ.ಶಾಲೆ ಭಕ್ತರಹಳ್ಳಿ(ತೃತೀಯ) 200 ಮೀಟರ್ ಓಟ: ಜೆ.ಪಿ.ಸಿಂಧೂ,…

News

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಲು ಕರೆ

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಚೀಮಂಗಲದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರಿನ ಸೋಲಾರ್ ವಿಜ್ಞಾನಿ…

News

ಶಿಡ್ಲಘಟ್ಟದ ಸಾಧಕರಿಗೆ ಹುಟ್ಟೂರಲ್ಲಿ ಸನ್ಮಾನ

ಸಾಧಕರು ಎಲ್ಲೇ ಇದ್ದು ಸಾಧನೆ ಮಾಡಿದರೂ ಅವರ ಹುಟ್ಟೂರು ಸಂಭ್ರಮಿಸುತ್ತದೆ. ಹುಟ್ಟೂರಿನೊಂದಿಗೆ ತಳುಕು ಹಾಕಿಕೊಂಡ ಅವರ ಹೆಸರಿನಿಂದ ‘ನಮ್ಮ ಊರಿನವರು ಈ ಸಾಧನೆ ಮಾಡಿದ್ದಾರೆ’…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel
Exit mobile version