Home News ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯ

ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯ

0

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಬುಧವಾರ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟಿಸಿದರು.
ರಾಜ್ಯದಲ್ಲಿ ದಿನೇ ದಿನೇ ರೈತರ ಆತ್ಮಹತ್ಯೆಗಳ ಬಗ್ಗೆ ವರದಿಯಾಗುತ್ತಿವೆ. ರೈತರು ವಿವಿಧ ಬ್ಯಾಂಕುಗಳಿಂದ ಮಾಡಿರುವ ಸಾಲಗಳನ್ನು ತೀರಿಸಲಾಗದೇ ಆತ್ಮಹತ್ಯೆಯ ದಾರಿ ತುಳಿಯಬೇಕಾಗಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ರೈತರೇ ಇಲ್ಲವಾಗುತ್ತಾರೆ. ಬೆಳೆಯನ್ನು ಬೆಳೆಯುವವರೇ ಇಲ್ಲದ ಸ್ಥಿತಿ ಯಾವುದೇ ರಾಜ್ಯ ಹಾಗೂ ದೇಶಕ್ಕೆ ಮಾರಕವಾಗುತ್ತದೆ. ಈ ಕೂಡಲೇ ಇಲ್ಲಿ ರೈತರ ಕಷ್ಟಗಳನ್ನು ರಾಜ್ಯ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಬೇಕಿದೆ. ಮಾನ್ಯ ಮುಖ್ಯಮಂತ್ರಿಗಳು ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರ ಆತ್ಮಹತ್ಯೆಗಳನ್ನು ಕೊನೆಗಾಣಿಸಬೇಕೆಂದು ಮನವಿ ಸಲ್ಲಿಸಿದರು.
ತಹಶೀಲ್ದಾರ್‌ ಪರವಾಗಿ ರಾಜಸ್ವ ನಿರೀಕ್ಷಕ ಮೋಹನ್‌ ಅವರಿಗೆ ರೈತರು ಮನವಿ ಪತ್ರವನ್ನು ಸಲ್ಲಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್‌, ಎಸ್‌.ಎಂ.ನಾರಾಯಣಸ್ವಾಮಿ, ಬೀರಪ್ಪ, ಪ್ರಭಾಕರ್‌, ಮಂಜುನಾಥ್, ಗಂಗುಲಪ್ಪ, ವಿಶ್ವನಾಥ, ದೇವರಾಜ್‌ ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!