ಶಿಡ್ಲಘಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಕರವೇ ರಾಜ್ಯ ಘಟಕದ ಅಧ್ಯಕ್ಷ ಪಿ.ಎ.ನಾರಾಯಣಗೌಡರ ಹುಟ್ಟುಹಬ್ಬದ ಪ್ರಯುಕ್ತ ತಾಲ್ಲೂಕು ಕರವೇ ಸದಸ್ಯರು ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿದರು. ಕರವೇ ಜಿಲ್ಲಾ ಉಪಾಧ್ಯಕ್ಷ ತಮೀಮ್ ಅನ್ಸಾರಿ, ಪ್ರಧಾನ ಕಾರ್ಯದರ್ಶಿ ದೇವರಾಜ್, ತಾಲ್ಲೂಕು ಅಧ್ಯಕ್ಷ ಎ.ನಾಗರಾಜ್, ಅಕ್ರಂಪಾಷ, ರಾಜ್ಕುಮಾರ್, ಗುರುರಾಜರಾವ್, ಬಿ.ಆರ್.ಅನಂತಕೃಷ್ಣ ಹಾಜರಿದ್ದರು.