Home News ವಿದ್ಯಾವಿಕಾಸ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮ

ವಿದ್ಯಾವಿಕಾಸ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮ

0

ತಾಲ್ಲೂಕಿನ ತಾತಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ “ವಿದ್ಯಾವಿಕಾಸ ಯೋಜನೆ” ಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಮಂಗಳನಾಥ ಸ್ವಾಮೀಜಿ ಮಾತನಾಡಿದರು.
ಜಾತಿ ಮತ ಭೇದವಿಲ್ಲದೆ ಶಿಕ್ಷಣ ಎಲ್ಲರಿಗೂ ಸಿಗಬೇಕು. ಕೆಳವರ್ಗದವರನ್ನು ಶಿಕ್ಷಣ ಮತ್ತು ಸಂಸ್ಕಾರ ಕಲಿಸುವ ಮೂಲಕ ಸದೃಢಗೊಳಿಸುವ ಕೆಲಸವನ್ನು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮೂಲಕ ಕೈಗೊಳ್ಳಲಾಗಿದೆ. ಕಳೆದ ಒಂದು ವರ್ಷದಿಂದ ತಾತಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ಒಂದು ಗಂಟೆಯ ಕಾಲ ಶಿಕ್ಷಣ ಮತ್ತು ಸಂಸ್ಕಾರ ಕಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಪ್ರತಿಭಾನ್ವಿತ ಬಡ ಮಕ್ಕಳನ್ನು ಗುರುತಿಸಿ ಅವರಿಗೆ ಉಚಿತ ವಸತಿ, ವಿದ್ಯೆ ನೀಡಲಾಗುವುದು. ಮಕ್ಕಳನ್ನು ಸರ್ವಾಂಗೀಣ ಸಂಪನ್ನತೆಯನ್ನಾಗಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮಕ್ಕಳ ಜ್ಞಾನಾರ್ಜನೆಗೆ ಪೋಷಕರು ಸಹಕಾರ ನೀಡಬೇಕಾಗಿದೆ. ಈ ಯೋಜನೆಯನ್ವಯ ತಾತಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಇನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಮತ್ತು ಪೋಷಕರು, ಶಾಲೆಗೆ ಎಲ್.ಇ.ಡಿ ಟಿ.ವಿ ಮತ್ತು ಸ್ಪೀಕರ್ ಗಳು, ಉತ್ತಮ ಕಂಪ್ಯೂಟರ್, ಯುಪಿಎಸ್, ಪ್ರಿಂಟರ್ ಹಾಗೂ ಶಾಲೆಯ ಆವರಣದಲ್ಲಿ ಧೂಳು ಹೆಚ್ಚಾಗಿರುವುದರಿಂದ ಆವರಣಕ್ಕೆ ಪಾರ್ಕಿಂಗ್ ಟೈಲ್ಸ್ ವ್ಯವಸ್ಥೆ ಮಾಡಿಕೊಟ್ಟರೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು. ಸ್ವಾಮೀಜಿ ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಬಿ.ಜಿ.ಎಸ್ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎನ್‌.ಶಿವರಾಮರೆಡ್ಡಿ, ಬಿಜಿಎಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮಹದೇವ್, ತಾತಹಳ್ಳಿ ಗ್ರಾಮದ ಕನಕಪ್ರಸಾದ್, ಕೃಷ್ಣಪ್ಪ, ಮುನಿನರಸಿಂಹಪ್ಪ, ಸರ್ಕಾರಿ ಶಾಲಾ ಶಿಕ್ಷಕರಾದ ದೇವರಾಜ್ ಹಾಜರಿದ್ದರು.

error: Content is protected !!