Home News ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸದಸ್ಯರ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸದಸ್ಯರ ಪ್ರತಿಭಟನೆ

0

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ವತಿಯಿಂದ ಮಂಗಳವಾರ ರಾತ್ರಿ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಂಡವಾಳಪರ ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ, ಕಾರ್ಮಿಕ ಕಾನೂನುಗಳ ಕಟ್ಟುನಿಟ್ಟಿನ ಜಾರಿಗಾಗಿ ಒತ್ತಾಯ, ಎಲ್ಲಾ ಕಾರ್ಮಿಕರಿಗೂ ಮಾಸಿಕ 18 ಸಾವರಿ ರೂಗಳ ಸಮಾನ ಕನಿಷ್ಠ ವೇತನ ಜಾರಿಯಾಗಬೇಕು, ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಬೇಕು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ವಿರೋಧ, ನಿರುದ್ಯೋಗ ನಿವಾರಣೆ ಹಾಗೂ ಉದ್ಯೋಗ ಸೃಷ್ಟಿಗಾಗಿ ಒತ್ತಾಯ, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಭವಿಷ್ಯನಿಧಿ, ಪಿಂಚಣಿ ಹಾಗೂ ವಸತಿ ಯೋಜನೆಗಾಗಿ ಆಗ್ರಹ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಸಾರ್ವಜನಿಕ ಪಡಿತರ ವ್ಯವಸ್ಥೆ ಸಾರ್ವತ್ರೀಕರಣಗೊಳಿಸಬೇಕು, ಕೃಷಿ ಕೂಲಿ ಕಾರ್ಮಿಕರಿಗಾಗಿ ಸೇವಾ ಸೌಲಭ್ಯಗಳ ಶಾಸನಕ್ಕಾಗಿ ಹಾಗೂ ನರೇಗಾ ಸಮರ್ಪಕ ಜಾರಿಗಾಗಿ ಒತ್ತಾಯ ಮುಂತಾದ ಬೇಡಿಕೆಗಳನ್ನಿಟ್ಟುಕೊಂಡು ಪ್ರತಿಭಟಿಸಿದರು.
ಮಧ್ಯರಾತ್ರಿಯಲ್ಲಿ ತಾಲ್ಲೂಕು ಕಚೇರಿಯ ಮುಂದೆ ಸಿಐಟಿಯು ಧ್ವಜಾರೋಹಣವನ್ನು ಮಾಡಿದರು.
ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಫಯಾಜ್‌, ಗುಲ್ಜಾರ್‌, ಪಾಪಣ್ಣ, ರತ್ನಕುಮಾರಿ, ಮಂಜುಳಾ, ಶಂಕರಪ್ಪ, ವೆಂಕಟೇಶ್‌, ಅಮ್ಮಾಜಾನ್‌ ಹಾಜರಿದ್ದರು.

error: Content is protected !!