ಗಡಿಯಲ್ಲಿನ ಸೈನಿಕರು ದೇಶದ ರಕ್ಷಣೆಗಾಗಿ ಹೋರಾಟ ಮಾಡಿದರೆ, ದೇಶದೊಳಗಿನ ಪ್ರಜೆಗಳು ಇಲ್ಲಿನ ಸಮಸ್ಯೆಗಳ ನಿವಾರಣೆಗಾಗಿ ಸೈನಿಕರಂತೆ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ಸರ್ವೋದಯ ಸೇವಾ ಸಂಸ್ಥೆಯ ಅಧ್ಯಕ್ಷ ನರೇಶ್ ಹೇಳಿದರು.
ನಗರದ ಶಾರದಾ ಕಾನ್ವೆಂಟ್ ಶಾಲೆಯಲ್ಲಿ ಸರ್ವೋದಯ ಸ್ವಯಂ ಸೇವಾ ಸಂಸ್ಥೆ ಹಾಗೂ ಸ್ವಾಮಿ ವಿವೇಕಾನಂದ ಯುವಜನ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ೧೯ ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಮೇಲೆ ನಡೆಯುತ್ತಿರುವ ಶತ್ರುರಾಷ್ಟ್ರಗಳ ಉಪಟಳಗಳನ್ನು ನಿಯಂತ್ರಣ ಮಾಡುವಲ್ಲಿ ಸೈನಿಕರು ಮಾಡುತ್ತಿರುವ ಹೋರಾಟ ಶ್ಲಾಘನೀಯ. ಸೈನಿಕರಿಗೆ ಆತ್ಮಸ್ಥೈರ್ಯವನ್ನು ತುಂಬಿಸಬೇಕಾಗಿರುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ದೇಶದಲ್ಲಿನ ಪ್ರತಿಯೊಬ್ಬ ನಾಗರಿಕರು ತಮ್ಮ ಮಕ್ಕಳು, ವೈದ್ಯರಾಗಲಿ, ಎಂಜಿನಿಯರ್ ಆಗಲಿ ಎನ್ನುವ ಬಯಕೆಯಿಂದ ಶಿಕ್ಷಣ ಕೊಡಿಸುತ್ತಿದ್ದಾರೆ. ಸೈನಿಕರನ್ನಾಗಿ ಮಾಡಬೇಕು ಎನ್ನುವ ಪರಿಕಲ್ಪನೆ ಮೂಡಲಿ ಎಂದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುಳಮ್ಮ ಮಾತನಾಡಿ, ರಾಷ್ಟ್ರದಲ್ಲಿ ಭ್ರಷ್ಟಾಚಾರ ನಿರ್ಮೂಲವಾಗಬೇಕು. ಆಂತರಿಕ ಸಮಸ್ಯೆಗಳಿಂದ ದೇಶ ಮುಕ್ತವಾಗಬೇಕಾದರೆ ಪ್ರತಿಯೊಬ್ಬ ಭಾರತೀಯರು ಸೈನಿಕರಂತೆ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕು. ಯೋಧರು ದೇಶಕ್ಕಾಗಿ ಹೋರಾಟ ಮಾಡುವ ಬಗೆ, ದೇಶವು ಎದುರಿಸುತ್ತಿರುವ ಆಂತರಿಕ ಸಮಸ್ಯೆಗಳ ಕುರಿತು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟು ಅವರಲ್ಲಿ ರಾಷ್ಟ್ರಪ್ರೇಮ ಮೂಡಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಮೇಣಬತ್ತಿಗಳನ್ನು ಬೆಳಗುವ ಮೂಲಕ ಯೋಧರಿಗೆ ಗೌರವ ಸಲ್ಲಿಸಿದರು.
ಕಾರ್ಮಿಕ ನಿರೀಕ್ಷಕ ವಿಶ್ವನಾಥ್, ಮಾನವ ಹಕ್ಕುಗಳ ಜಾಗೃತಿ ಕಾರ್ಮಿಕ ಅಧ್ಯಕ್ಷ ಪ್ರದೀಪ್, ಶಾರದಾ ಶಾಲೆಯ ಮುಖ್ಯಸ್ಥ ಶ್ರೀಕಾಂತ್, ಮಂಜುನಾಥ್, ರಾಘವೇಂದ್ರ, ಶಾಲಾ ಸಿಬ್ಬಂದಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







