34.1 C
Sidlaghatta
Friday, March 29, 2024

ಶಿಡ್ಲಘಟ್ಟದಲ್ಲಿ ವೈಭವದಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

- Advertisement -
- Advertisement -

ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಭಾನುವಾರ ಪಟ್ಟಣದ ಟಿ.ಬಿ.ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು. ಯಾದವ ಕುಲಸ್ಥರು ಕುಟುಂಬ ಸಮೇತರಾಗಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆಯನ್ನು ನೆರವೇರಿಸಿದರು.
ತಾಲ್ಲೂಕಿನ ಯಾದವ ಕುಲಸ್ಥರಿಂದ ಮೆರವಣಿಗೆಯನ್ನು ಆಯೋಜಿಸಿದ್ದು, ಶ್ರೀಕೃಷ್ಣ ಮೂರ್ತಿಗಳಿರುವ ಮುತ್ತಿನ ಪಲ್ಲಕ್ಕಿಗಳು, ಸಪ್ತಾಶ್ವದ ರಥಗಳು, ಕೀಲುಕುದುರೆ, ಗಾರ್ಡಿಬೊಂಬೆ, ನವಿಲುಬೊಂಬೆ, ತಮಟೆ ವಾದನ, ನಾದಸ್ವರ, ಶ್ರೀಕೃಷ್ಣ ವೇಷಧಾರಿಗಳಾದ ಮಕ್ಕಳು, ದೀಪಗಳನ್ನು ಹೊತ್ತ ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು ಆಕರ್ಷಕವಾಗಿತ್ತು.
ಕೃಷ್ಣಸ್ವಾಮಿ ದೇವಸ್ಥಾನದಲ್ಲಿ ಬಾಲಕೃಷ್ಣನ ಮೂರ್ತಿಯನ್ನು ತೊಟ್ಟಿಲಲ್ಲಿರಿಸಿ ಬೆಣ್ಣೆ, ಚಕ್ಕುಲಿ, ನಿಪ್ಪಟ್ಟು, ಕೋಡುಬಳೆ ಹಾಗೂ ಹಣ್ಣುಗಳಿಂದ ಸಿಂಗರಿಸಲಾಗಿತ್ತು. ದೇವಾಲಯದಲ್ಲಿ ಮಹಾಮಂಗಳಾರತಿಯ ನಂತರ ಪ್ರಸಾದವನ್ನು ವಿನಿಯೋಗಿಸಲಾಯಿತು. ಪಟ್ಟಣದ ಉಲ್ಲೂರುಪೇಟೆಯ ಭಜನೆ ಮಂದಿರದಲ್ಲಿರುವ ಪುರಾತನ ತಂಜಾವೂರು ಚಿತ್ರಕಲೆಯ ಬಾಲಕೃಷ್ಣನ ಚಿತ್ರಪಟಕ್ಕೆ ವಿಶೇಷ ಅಲಂಕಾರವನ್ನು ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಕೆ.ಪಿ.ಸಿ.ಸಿ. ಉಪಾಧ್ಯಕ್ಷ ವಿ.ಮುನಿಯಪ್ಪ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸುಬ್ರಮಣಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಪ್ರಥಮ ಬಾರಿಗೆ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಆಯೋಜಿಸಿದ್ದು, ಶಾಸಕ ಎಂ.ರಾಜಣ್ಣ ಉದ್ಘಾಟಿಸಿ ಮಾತನಾಡಿ, ‘ಶ್ರೀಕೃಷ್ಣ ಭರತಖಂಡದ ಐಕ್ಯತೆಗಾಗಿ ಶ್ರಮಿಸಿದ ಮಹಾನುಭಾವ. ಶ್ರೀಕೃಷ್ಣ ಯಾವುದೇ ರಾಜ್ಯದ ರಾಜನಾಗದಿದ್ದರೂ ದೇಶದಲ್ಲಿದ್ದ ಆಗಿನ ಎಲ್ಲಾ ರಾಜರಿಂದಲೂ ಪೂಜಿಸಿಕೊಂಡಥಹ ಶ್ರೇಷ್ಠ ವ್ಯಕ್ತಿ. ದೇಶದಲ್ಲಿ ಧರ್ಮದ ಸ್ಥಾಪನೆಗಾಗಿ ಅಧರ್ಮದ ಹಾದಿಯಲ್ಲಿದ್ದವರನ್ನೆಲ್ಲಾ ನಾಶ ಮಾಡಿ, ಜಗತ್ತಿಗೆ ಗೀತೆಯನ್ನು ನೀಡಿ ಬದುಕುವ ಮಾರ್ಗವನ್ನು ತಿಳಿಸಿಕೊಟ್ಟಿದ್ದಾರೆ. ಶ್ರೀಕೃಷ್ಣ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಮನುಕುಲಕ್ಕೇ ಸೇರುವಂಥಹ ಶ್ರೇಷ್ಠ ವ್ಯಕ್ತಿತ್ವ. ಗೀತೆಯ ಸಾರವನ್ನು ಜನಸಾಮಾನ್ಯರಿಗೆ ತಲುಪಿಸುವುದು ಮತ್ತು ಅದನ್ನು ಅಳವಡಿಸಿಕೊಳ್ಳುವುದು ಸಮಾಜದ ಏಳಿಗೆಗೆ ಅತ್ಯಗತ್ಯ’ ಎಂದು ಹೇಳಿದರು.
ತಹಶೀಲ್ದಾರ್‌ ಜಿ.ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತಿ ಸದಸ್ಯ ನಾರಾಯಣಸ್ವಾಮಿ, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಯೋಗಾನಂದ, ಯಾದವ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಆರ್‌.ನರನಿಂಹರಾಜು, ಕೆ.ಎಂ.ಎಫ್‌. ನಿರ್ದೇಶಕ ಬಂಕ್‌ ಮುನಿಯಪ್ಪ, ಡಾ.ಡಿ.ಟಿ.ಸತ್ಯನಾರಾಯಣರಾವ್‌ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಲ್ಲಕ್ಕಿಗಳ ತಂಡದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಮಾಜಿ ಅಧ್ಯಕ್ಷ ವೇಣುಗೋಪಾಲ್‌, ಪಿ.ಎಲ್‌.ಡಿ. ಬ್ಯಾಂಕ್‌ ಮಾಜಿ ಉಪಾಧ್ಯಕ್ಷ ಅಶ್ವತ್ಥಪ್ಪ, ಪುರಸಭೆ ಸದಸ್ಯ ಲಕ್ಷ್ಮಣ್‌, ಡಿ.ಬಿ.ವೆಂಕಟೇಶ್‌, ಆರ್‌.ವಿಜಯಕುಮಾರ್‌, ಎಸ್‌.ಎ.ನಾಗರಾಜ್‌, ಕುಮಾರ್‌, ರಾಮಚಂದ್ರಪ್ಪ, ಗುರುರಾಜರಾವ್‌, ರಜಸ್ವ ನಿರೀಕ್ಷಕ ಸುಬ್ರಮಣಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!